ಕರ್ನಾಟಕ

karnataka

ETV Bharat / state

ದೇಶದೆಲ್ಲೆಡೆ ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿ ಕೆ ಶಿವಕುಮಾರ್ - Lok Sabha Election 2024

ಬರ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಕುರಿತಾಗಿ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿಧಾನಸೌಧದಲ್ಲಿ ನಡೆಯಿತು.

DCM DK Shivakumar spoke to the media.
ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು. (ETV Bharat)

By ETV Bharat Karnataka Team

Published : May 17, 2024, 9:12 PM IST

Updated : May 17, 2024, 9:48 PM IST

ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು. (ETV Bharat)

ಬೆಂಗಳೂರು:ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಇಂದು ಅಧಿಕಾರಿಗಳ ಜತೆ ನಡೆದ ಸಭೆ ಬಗ್ಗೆ ಕೇಳಿದಾಗ, ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಮಳೆ ಪರಿಣಾಮ ಕುರಿತು ಪ್ರತ್ಯೇಕ ಸಭೆ ಮಾಡುತ್ತೇನೆ. ಬತ್ತಿ ಹೋಗಿರುವ ಕೆರೆಗಳಿಗೆ ಪರಿಷ್ಕರಿಸಿದ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂಓದಿ:ಲೋಕ ಸಮರ: 14-16 ಕ್ಷೇತ್ರ ಕಾಂಗ್ರೆಸ್ ಗೆಲ್ಲಲಿದೆ - ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ - Minister Satish Jarkiholi

Last Updated : May 17, 2024, 9:48 PM IST

ABOUT THE AUTHOR

...view details