ಕರ್ನಾಟಕ

karnataka

ETV Bharat / state

ರಾಯಚೂರು: ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ - Lok Sabha Election

2ನೇ ಹಂತದ ಲೋಕಸಭಾ ಚುನಾವಣೆಗೆ ರಾಯಚೂರು ಜಿಲ್ಲೆ ಸನ್ನದ್ಧವಾಗಿದೆ.

ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ
ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ (Etv Bharat)

By ETV Bharat Karnataka Team

Published : May 6, 2024, 11:42 AM IST

Updated : May 6, 2024, 12:51 PM IST

ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾಹಿತಿ (Etv Bharat)

ರಾಯಚೂರು:ನಾಳೆ ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.

"ಕ್ಷೇತ್ರ ವ್ಯಾಪ್ತಿಯಲ್ಲಿ 20,10,437 ಮತದಾರರಿದ್ದಾರೆ. 2,203 ಮತಗಟ್ಟೆಗಳಿವೆ. 8,464 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಿಸಲಾಗಿದೆ. ಬೆಳಿಗ್ಗೆ 07ರಿಂದ ಸಂಜೆ 06ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ" ಎಂದು ಹೇಳಿದರು.

"ಪಾರದರ್ಶಕ ಚುನಾವಣೆಗೆ ಇವಿಎಂಗಳ ಪರಿಶೀಲನಾ ಕಾರ್ಯ ನಡೆದಿದೆ. ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನೂ ಅವರ ಗಮನಕ್ಕೆ ತರಲಾಗಿದೆ" ಎಂದರು.

"ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ಕುಳಿತುಕೊಳ್ಳಲು ಬೆಂಚ್​​, ಅಂಗವಿಕಲರಿಗೆ ರ‍್ಯಾಂಪ್​, ವೀಲ್‌ಚೇರ್​ ಹಾಗೂ ನೆರಳಿಗೆ ಶ್ಯಾಮಿಯಾನದ ವ್ಯವಸ್ಥೆ ಮಾಡಲಾಗಿದೆ" ಎಂದರು.

"ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯಲ್ಲಿ 9,94,646 ಪುರುಷ, 10,15,158 ಮಹಿಳಾ, 299 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಹಾಗೂ 334 ಸೇವಾ ಮತದಾರರಿದ್ದಾರೆ. ತಾಪಮಾನ ಹೆಚ್ಚಿರುವುದರಿಂದ ಮತಗಟ್ಟೆಗಳಲ್ಲಿ ಆಶಾ ಕಾರ್ಯಕರ್ತರು ಹಾಗು ಅರೆ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ" ಎಂದು ತಿಳಿಸಿದರು.

"ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ದಿನಾಂಕದಿಂದ ಇಲ್ಲಿಯವರೆಗೆ ನೀತಿ ಸಂಹಿತೆ ಉಲ್ಲಂಘಿಸಿದ ಒಟ್ಟು 96 ಪ್ರಕರಣಗಳು ದಾಖಲಾಗಿವೆ. ವಿವಿಧ ತಂಡಗಳು 17,57,400 ರೂ ಜಪ್ತಿ ಮಾಡಿವೆ. 15,577.857 ಲೀಟರ್‌ ಒಟ್ಟು ಮದ್ಯ ಜಪ್ತಿ ಮಾಡಲಾಗಿದೆ" ಎಂದರು.

ಇದನ್ನೂ ಓದಿ:ಲೋಕಸಮರದಲ್ಲಿ ಗಡಿ ಗಲಾಟೆ ಗೌಣ: ರಾಷ್ಟ್ರೀಯ ಪಕ್ಷಗಳ ಬಗ್ಗೆ ಕನ್ನಡ ಹೋರಾಟಗಾರರು ಹೇಳುವುದೇನು? - Border Dispute

Last Updated : May 6, 2024, 12:51 PM IST

ABOUT THE AUTHOR

...view details