ಬಾಗಲಕೋಟೆ:ದೇಶದಲ್ಲಿರುವ ಎಲ್ಲಾ ಭ್ರಷ್ಟರು ಬಿಜೆಪಿಯಲ್ಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಾಗ್ದಾಳಿ ನಡೆಸಿದರು. ವಿದ್ಯಾಗಿರಿಯಲ್ಲಿ ಇಂದು ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನಕ್ಕೆ ಭೇಟಿ ನೀಡಿದ ವೇಳೆ 'ಈಟಿವಿ ಭಾರತ'ದೊಂದಿಗೆ ಅವರು ಮಾತನಾಡಿದರು.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ, ಭ್ರಷ್ಟಾಚಾರ ಗಂಗೋತ್ರಿಯೇ ಬಿಜೆಪಿ ಎಂದು ಟೀಕಿಸಿದರು.