ಬೆಂಗಳೂರು:ನಾಲ್ಕೂವರೆ ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ತಂದೆಯ ವಿರುದ್ಧ ರಾಮಮೂರ್ತಿನಗರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು 41 ವರ್ಷದ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ತನ್ನ ಇಬ್ಬರು ಮಕ್ಕಳನ್ನು ಪ್ರತಿ ಭಾನುವಾರ ಪತಿಯ ಮನೆಗೆ ಪತ್ನಿ ಕಳುಹಿಸುತ್ತಿದ್ದರು.
ಡಿ.15ರಂದು ಬೆಳಗ್ಗೆ 11 ಗಂಟೆಗೆ ಪತಿ ಮನೆಗೆ ಕಳುಹಿಸಿ 2 ಗಂಟೆಗೆ ಕರೆದೊಯ್ಯುವಾಗ ವರ್ಷದ ಮಗಳು ಅಳುತ್ತಿದ್ದಳು. ಈ ಬಗ್ಗೆ ಪತಿಯನ್ನು ಪ್ರಶ್ನಿಸಿದಾಗ ಏನನ್ನೂ ಹೇಳದೆ ಹೊರಟು ಹೋಗಿದ್ದರು. ಆಟವಾಡುವಾಗ ಮಗಳು ಬಿದ್ದಿರಬಹುದು ಅಂದುಕೊಂಡೆ. ಆದರೂ ಅನುಮಾನಗೊಂಡು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಪರಿಶೀಲಿಸಿದ ವೈದ್ಯರು ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ದೃಢಪಡಿಸಿದ್ದಾರೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.