ಬೆಂಗಳೂರು:ತಾವು ಕುಟುಂಬ ಸದಸ್ಯರ ಜೊತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದೆ. ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇಂದಿನಿಂದ ಸೆಪ್ಟೆಂಬರ್ 15ರವರೆಗೆ ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸ ಸಂದರ್ಭದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿ ಮಾಧ್ಯಮಗಳಲ್ಲಿ ವರದಿಗಳಾಗಿತ್ತು. ಈ ಹಿನ್ನೆಲೆಯಲ್ಲಿ ಡಿಕೆಶಿ ಮಾಧ್ಯಮ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.