ಬೆಂಗಳೂರು:ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಸರ್ಕಾರದ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿದೆ.
ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ. ಇದರ ಅಂಗವಾಗಿ ಶಕ್ತಿ ಯೋಜನೆ ಜಾರಿ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಆಂಧ್ರದ ಗೃಹ ಸಚಿವೆ ಅನಿತಾ, ಸಾರಿಗೆ ಸಚಿವ ರಾಮಮೋಹನ್ ರೆಡ್ಡಿ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ ಒಳಗೊಂಡಂತೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ಶಕ್ತಿ ಯೋಜನೆ ಬಗ್ಗೆ ಅರಿಯಲು ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆದುಕೊಂಡಿತು. ಶಕ್ತಿ ಯೋಜನೆಯಿಂದಾಗಿ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರೊಬ್ಬರು ಉತ್ತರಿಸಿ ಶಕ್ತಿ ಯೋಜನೆಯಿಂದಾಗಿ ನಮಗೆ ಅನುಕೂಲವಾಗಿದೆ. ಪ್ರತಿ ತಿಂಗಳು 1200 ರೂಪಾಯಿ ಬಸ್ ಪಾಸ್ಗೆ ತಗುಲಿತ್ತು.