ಕರ್ನಾಟಕ

karnataka

ETV Bharat / state

ಆಂಧ್ರ ಸಚಿವರಿಂದ ಸಿಎಂ‌ ಸಿದ್ದರಾಮಯ್ಯ ಭೇಟಿ; ಶಕ್ತಿ ಯೋಜನೆ ಬಗ್ಗೆ ಸಮಾಲೋಚನೆ - DISCUSSION ON SHAKTI YOJANA

ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿರುವ ಆಂಧ್ರಪ್ರದೇಶ ಸರ್ಕಾರದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಯಿತು.

DISCUSSION ON SHAKTI YOJANA
ಸಿಎಂ‌ ಸಿದ್ದರಾಮಯ್ಯ ಜೊತೆ ಸಮಾಲೋಚನೆಯಲ್ಲಿ ಆಂಧ್ರ ಸಚಿವರು (ETV Bharat)

By ETV Bharat Karnataka Team

Published : Jan 4, 2025, 6:56 AM IST

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರದಪಂಚ ಗ್ಯಾರಂಟಿಗಳಲ್ಲಿ ಒಂದಾದ'ಶಕ್ತಿ ಯೋಜನೆ' ಸಂಬಂಧ ಚರ್ಚಿಸಲು ನೆರೆಯ ರಾಜ್ಯವಾದ ಆಂಧ್ರಪ್ರದೇಶದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಶುಕ್ರವಾರ ಭೇಟಿಯಾದರು.

ಆಂಧ್ರ ಸರ್ಕಾರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಹಾಗೂ ಇಲಾಖೆಗಳ ಅಧಿಕಾರಿಗಳ ತಂಡ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲವು ಹೊತ್ತು ಚರ್ಚೆ ನಡೆಸಿದರು.

ರಾಜ್ಯದಲ್ಲಿ ಜಾರಿಯಾಗಿರುವ ಉಚಿತ ಬಸ್ ಪ್ರಯಾಣದ 'ಶಕ್ತಿ ಯೋಜನೆ'ಯ ಆರ್ಥಿಕತೆ, ಸಾಧನೆಗಳ ಕುರಿತಂತೆ ಚರ್ಚೆ ನಡೆಸಿದರು. ಮುಖ್ಯವಾಗಿ ಶಕ್ತಿ ಯೋಜನೆಯ ಯಶಸ್ಸಿನಿಂದ ಆರ್ಥಿಕತೆಗೆ ಚೈತನ್ಯ ಸಿಕ್ಕಿರುವುದು ಮತ್ತು ಮಹಿಳಾ ಸಬಲೀಕರಣದ ದೃಷ್ಟಿಯಿಂದ ಆಗಿರುವ ಬದಲಾವಣೆಗಳ ಕುರಿತಂತೆ ಚರ್ಚಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ವಿನಿಮಯ ಮಾಡಿಕೊಂಡರು.

ಇದನ್ನೂ ಓದಿ:ಶಕ್ತಿ ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರಿಗೆ ಭೇಟಿ ನೀಡಿದ ಆಂಧ್ರ ಸರ್ಕಾರದ ನಿಯೋಗ - SHAKTI YOJANA

ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದ್ದು, ಇದರ ಅಂಗವಾಗಿ ಶಕ್ತಿ ಯೋಜನೆ ಜಾರಿ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿದೆ. ಶಕ್ತಿ ಯೋಜನೆ ಬಗ್ಗೆ ಅರಿಯಲು ನಿನ್ನೆ ಶಾಂತಿನಗರ ಬಿಎಂಟಿಸಿ ಬಸ್​ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಕೂಡ ಪಡೆದುಕೊಂಡಿತು.

ಇದನ್ನೂ ಓದಿ:ಆಂಧ್ರದಲ್ಲಿ 'ಶಕ್ತಿ ಯೋಜನೆ' ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ನೀಡಿದ ಸಲಹೆಗಳೇನು? - ANDHRA PRADESH DELEGATION VISIT

ABOUT THE AUTHOR

...view details