ಕರ್ನಾಟಕ

karnataka

By ETV Bharat Karnataka Team

Published : Jul 4, 2024, 8:23 AM IST

ETV Bharat / state

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರದ ಪಿಸಿಸಿ ಅಧ್ಯಕ್ಷೆ ಶರ್ಮೀಳಾ - CM Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಂಧ್ರಪ್ರದೇಶ ಕಾಂಗ್ರೆಸ್ ಆಧ್ಯಕ್ಷೆ ಶರ್ಮಿಳಾ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರದ ಪಿಸಿಸಿ ಅಧ್ಯಕ್ಷೆ ಶರ್ಮೀಳಾ
ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರದ ಪಿಸಿಸಿ ಅಧ್ಯಕ್ಷೆ ಶರ್ಮೀಳಾ (ETV Bharat)

ಬೆಂಗಳೂರು:ಆಂಧ್ರದ ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಆಂಧ್ರದ ಪಿಸಿಸಿ ಅಧ್ಯಕ್ಷೆ ಶರ್ಮಿಳಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶರ್ಮೀಳಾ ಅವರು ಮಹತ್ವದ ಮಾತುಕತೆ ನಡೆಸಿದರು. ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯ ವಿದ್ಯಮಾನಗಳು ಹಾಗೂ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಶರ್ಮಿಳಾ ಹಾಗೂ ಸಿದ್ದರಾಮಯ್ಯ ಅವರ ಭೇಟಿ ಕುತೂಹಲ ಸಹ ಮೂಡಿಸಿದೆ.

ರೈತ ಮುಖಂಡ ರಾಕೇಶ್ ಟಿಕಾಯತ್ ನಿಯೋಗದಿಂದ ಸಿಎಂ ಭೇಟಿ (ETV Bharat)

ಇದನ್ನೂ ಓದಿ: ಡೆಂಗ್ಯೂ ಟೆಸ್ಟಿಂಗ್: ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಆಸ್ಪತ್ರೆಗಳಿಗೆ ಕಡಿವಾಣ: 600 ರೂ. ದರ ನಿಗದಿಪಡಿಸಿ ಸರ್ಕಾರದ ಆದೇಶ - Dengue testing rate

ರೈತ ಮುಖಂಡ ರಾಕೇಶ್ ಟಿಕಾಯತ್ ಭೇಟಿ:ರೈತ ಮುಖಂಡ ರಾಕೇಶ್ ಟಿಕಾಯತ್ ನೇತೃತ್ವದ ರೈತ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಬೆಂಗಳೂರಿನಲ್ಲಿ 2025 ಕ್ಕೆ ನಡೆಯಲಿರುವ ಆಹಾರ ಹಕ್ಕು ಮತ್ತು ಆಹಾರ ಸಾರ್ವಭೌಮತೆ ಕುರಿತ ಅಂತಾರಾಷ್ಟ್ರೀಯ ರೈತ ಸಮಾವೇಶವನ್ನು ಉದ್ಘಾಟಿಸುವಂತೆ ಮನವಿ ಮಾಡಿತು.
ರಾಕೇಶ್ ಟಿಕಾಯತ್ ಹಾಗೂ ಇತರ ರೈತ ಮುಖಂಡರು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ನಡೆಯಲಿರುವ ಈ ಸಮಾವೇಶ ಮೂರನೇಯದ್ದಾಗಿದೆ. ಈ ಹಿಂದೆ ಯುರೋಪ್ ಮತ್ತು ಅಮೆರಿಕದಲ್ಲಿ ಈ ಸಮಾವೇಶಗಳು ಅತ್ಯಂತ ಯಶಸ್ವಿಯಾಗಿ ನಡೆದಿವೆ. ಮೂರನೇ ಸಮಾವೇಶ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ನಡೆಸಲು ದೇಶದ ಸರ್ವ ರೈತ ಸಂಘಟನೆಗಳ, ರೈತ ಹೋರಾಟಗಳ ಸಮನ್ವಯ ಸಮಿತಿ ಒಮ್ಮತದಿಂದ ತೀರ್ಮಾನಿಸಿದೆ. ನಿಯೋಗದಲ್ಲಿ ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ, ಪ್ರೊ.ರವಿವರ್ಮಕುಮಾರ್ ಸೇರಿ ದಲಿತ ಸಂಘಟನೆಗಳ ಪರವಾಗಿ ಮಾವಳ್ಳಿ ಶಂಕರ್ ಸೇರಿ ಅಂಕಣಕಾರ, ನಾಟಕಕಾರ ಬಿ.ಚಂದ್ರೇಗೌಡ ಸೇರಿ ಹಲವು ಮುಖ‌ಂಡರು ಇದ್ದರು.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂ ದೇಣಿಗೆ (ETV Bharat)

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂ:ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ 1,09,07,48,050 ರೂ. ಲಾಭಾಂಶ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂ. ಗಳ ದೇಣಿಗೆಯ ಚೆಕ್‌ಗಳನ್ನು ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ನಂತರ ಮುಖ್ಯಮಂತ್ರಿಯವರು ರೇಷ್ಮೆ ಮತ್ತು ಗಣಿ ಇಲಾಖೆಗೆ ಸಂಬಂಧಿಸಿದ ಸಭೆ ನಡೆಸಿದರು. ಸಭೆಯಲ್ಲಿ ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್‌, ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ವೆಂಕಟೇಶ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ರೇಷ್ಮೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್‌, ಎಂ.ಎಸ್.ಎಂ.ಇ ಇಲಾಖೆ ಕಾರ್ಯದರ್ಶಿ ವಿಪುಲ್‌ ಬನ್ಸಲ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯದ ಜನರಿಗೆ ಸಿಹಿ ಸುದ್ದಿ; ಆಸ್ತಿ ತೆರಿಗೆ ಪಾವತಿಗೆ ಶೇ.5ರಷ್ಟು ರಿಯಾಯಿತಿ ಅವಧಿ ವಿಸ್ತರಿಸಿದ ಸರ್ಕಾರ - Tax Payment Period Extended

ABOUT THE AUTHOR

...view details