ಕರ್ನಾಟಕ

karnataka

ETV Bharat / state

ಗಂಗಾವತಿ: ಅಂಗನವಾಡಿ ಸೀಲಿಂಗ್ ಕುಸಿದು ನಾಲ್ವರು ಮಕ್ಕಳಿಗೆ ಗಾಯ - ceiling collapses

ಪಾಠ ಮಾಡುತ್ತಿರುವಾಗಲೇ ಅಂಗನವಾಡಿ ಕೇಂದ್ರದ ಸೀಲಿಂಗ್ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಗಾಯಗಳಾಗಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಅಂಗನವಾಡಿ ಸೀಲಿಂಗ್ ಕುಸಿದು ನಾಲ್ಕು ಮಕ್ಕಳಿಗೆ ಗಾಯ
ಅಂಗನವಾಡಿ ಸೀಲಿಂಗ್ ಕುಸಿದು ನಾಲ್ಕು ಮಕ್ಕಳಿಗೆ ಗಾಯ (ETV Bharat)

By ETV Bharat Karnataka Team

Published : Sep 23, 2024, 1:25 PM IST

ಗಂಗಾವತಿ (ಕೊಪ್ಪಳ):ಅಂಗನವಾಡಿ ಕೇಂದ್ರದ ಸೀಲಿಂಗ್​ (ಛತ್ತು) ಕುಸಿದು ಬಿದ್ದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಗರಸಭೆಯ ವ್ಯಾಪ್ತಿಯ ಮಹೆಬೂಬನಗರದ 7ನೇ ಅಂಗನವಾಡಿ ಕೇಂದ್ರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ನಾಲ್ಕರಿಂದ ಐದು ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಗಾಯಗಳಾಗಿದ್ದು ಸ್ಥಳೀಯರು ತಕ್ಷಣ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಮೂರು ದಿನಗಳ ರಜೆಯ ಬಳಿಕ ಸೋಮವಾರ ಎಂದಿನಂತೆ ಅಂಗನವಾಡಿ ಕೇಂದ್ರ ಆರಂಭವಾಗಿದೆ. ಕೇಂದ್ರದ ಶಿಕ್ಷಕಿ ಹಸೀನಾ ಮಕ್ಕಳನ್ನು ವೃತ್ತಾಕಾರದಲ್ಲಿ ಕೂರಿಸಿ ಪಾಠ ಮಾಡುತ್ತಿರುವಾಗ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದೆ. ಕೇಂದ್ರದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು.

ಗಾಯಗೊಂಡ ಒಂದು ಮಗುವಿಗೆ ಎಕ್ಸ್​​ರೇ ಮಾಡಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಮಕ್ಕಳಿಗೆ ಚಿಕಿತ್ಸೆ ನೀಡಿದ ಮಕ್ಕಳ ತಜ್ಞವೈದ್ಯ ಅಮರೇಶ ಅರಳಿ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರಸಭೆಯ ಅಧ್ಯಕ್ಷ ಮೌಲಸಾಬ್, ವಾರ್ಡ್​ ಸದಸ್ಯ ಮನೋಹರಸ್ವಾಮಿ, ಸಿಡಿಪಿಒ ಜಯಶ್ರೀ ದೇಸಾಯಿ, ಸೂಪರವೈಸರ್ ಚಂದ್ರಮ್ಮ ಸೇರಿದಂತೆ ನಗರಸಭೆ ಸದಸ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ:ಬೆಂಗಳೂರಲ್ಲಿ ಯುವಕನ ಮುಖಕ್ಕೆ ಆ್ಯಸಿಡ್ ಮಿಶ್ರಿತ ಕೆಮಿಕಲ್ ಎರಚಿ ದುಷ್ಕರ್ಮಿ ಪರಾರಿ - Acid Attack

ABOUT THE AUTHOR

...view details