ಕರ್ನಾಟಕ

karnataka

ETV Bharat / state

ವನ್ಯಜೀವಿ - ಮಾನವ ಸಂಘರ್ಷ: ನಾಳೆ ಅಂತರ್​ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ - Animal human conflict

ದಿನದಿಂದ ದಿನಕ್ಕೆ ದಕ್ಷಿಣ ಭಾರತದಲ್ಲಿ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಾಳೆ ಅಂತರ್​ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ ನಡೆಯಲಿದೆ.

Important meeting  inter state forest ministers
ನಾಳೆ ಅಂತರ್​ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ

By ETV Bharat Karnataka Team

Published : Mar 9, 2024, 8:23 PM IST

ಬೆಂಗಳೂರು: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾನವ - ವನ್ಯಜೀವಿ ಸಂಘರ್ಷದಲ್ಲಿ ಏರಿಕೆಯಾಗುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10 ರಂದು ಬಂಡೀಪುರದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ.

ಕರ್ನಾಟಕದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಕೇರಳದ ಸಹವರ್ತಿ ಎ.ಕೆ. ಶಶೀಂದ್ರನ್ ಈ ಸಭೆಯಲ್ಲಿ ಭಾಗಿಯಾಗಲಿದ್ದು, ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಉನ್ನತ ಅರಣ್ಯಾಧಿಕಾರಿಗಳೂ ಪಾಲ್ಗೊಳ್ಳುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಈ ಮೊದಲ ಅಂತರ್​ ರಾಜ್ಯ ಸಮನ್ವಯ ಸಮಿತಿ ಸಭೆ ಇದಾಗಿದ್ದು, ಮೂರೂ ರಾಜ್ಯಗಳ ನಡುವೆ ಅರಣ್ಯ ಸಂರಕ್ಷಣೆ, ಕಳ್ಳಬೇಟೆ, ಅರಣ್ಯ ನಾಶ, ವನ್ಯಜೀವಿಗಳ ಸಂಚಾರ ಕುರಿತಂತೆ ಮಾಹಿತಿ ವಿನಿಮಯ ಹಾಗೂ ಉತ್ತಮರೂಢಿ, ಜ್ಞಾನ ಮತ್ತು ತಂತ್ರಜ್ಞಾನದ ವಿನಿಮಯಕ್ಕೆ ಹಾಗೂ ನಿರಂತರ ಸಮನ್ವಯಕ್ಕೆ ನಾಂದಿ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಕಳೆದ ನವೆಂಬರ್ ನಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಬಳಿ ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸಿ, ಬಂಡೀಪುರ ಅರಣ್ಯದಲ್ಲಿ ಬಿಡಲಾಗಿದ್ದ ಮಖ್ನಾ ಎಂಬ ದಂತರಹಿತ ಗಂಡಾನೆ ಕಳೆದ ತಿಂಗಳು ವೈನಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಂತರ್​ ರಾಜ್ಯ ಅರಣ್ಯ ಸಚಿವರ ಸಭೆ ನಡೆಸಿ ಪರಿಹಾರೋಪಾಯಗಳ ಕುರಿತಂತೆ ಮತ್ತು ಈ ನಿಟ್ಟಿನಲ್ಲಿ ಸಮನ್ವಯ ಸಾಧಿಸಲು ಚರ್ಚಿಸುವುದಾಗಿ ಪ್ರಕಟಿಸಿದ್ದರು.

ಈಶ್ವರ ಖಂಡ್ರೆ ಅವರ ಪ್ರಯತ್ನದಿಂದಾಗಿ ಸಚಿವರ ಮಟ್ಟದ ಈ ಸಭೆ ನಡೆಯುತ್ತಿದ್ದು, ಇದು ಅಂತಾರಾಜ್ಯ ಸಮನ್ವಯ ಮತ್ತು ವನ್ಯಜೀವಿ -ಮಾನವ ಸಂಘರ್ಷ ತಗ್ಗಿಸುವಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಲಾಗುತ್ತಿದೆ.

ಓದಿ:ಹೆಚ್ಚುತ್ತಿದೆ ಮಾನವ - ಪ್ರಾಣಿ ಸಂಘರ್ಷ: ಅರಣ್ಯನಾಶದಿಂದ ಚಿರತೆ, ಹುಲಿ ಆನೆಗಳ ಪರದಾಟ, ಜೀವಾಂತಕದಲ್ಲಿ ಮಾನವ

ABOUT THE AUTHOR

...view details