ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ.
ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ; ಎಸ್ಐಟಿಯಿಂದ ಮತ್ತೋರ್ವ ಆರೋಪಿ ಅರೆಸ್ಟ್ - Valmiki Corporation Scam - VALMIKI CORPORATION SCAM
ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಂತೆ ಎಸ್ಐಟಿ ತಂಡ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ.
Published : Jul 16, 2024, 10:41 AM IST
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಜಿ.ರಸ್ತೆ ಶಾಖೆಯಲ್ಲಿರುವ ನಿಗಮದ ಖಾತೆಯಿಂದ ಹೈದರಾಬಾದ್‌ನ 18 ಬ್ಯಾಂಕ್ ಖಾತೆಗಳಿಗೆ 94 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿರುವ ಸತ್ಯನಾರಾಯಣ ವರ್ಮಾ ಆ ಖಾತೆಗಳ ಮೇಲ್ವಿಚಾರಣೆ ವಹಿಸಿಕೊಂಡಿದ್ದ. ಮತ್ತು ಆ ಬ್ಯಾಂಕ್ ಖಾತೆಯಿಂದ ಶ್ರೀನಿವಾಸ್ ರಾವ್ ಹೆಸರಿಗೆ 10 ಕೋಟಿ ರೂ ವರ್ಗಾಯಿಸಿದ್ದ. ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದ ಆರೋಪಿ ಶ್ರೀನಿವಾಸ್ ರಾವ್, ಪ್ರಕರಣ ಬೆಳಕಿಗೆ ಬರುತ್ತಿದಂತೆ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನ ಬಂಧಿಸಲಾಗಿದ್ದು, 9 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಎಸ್ಐಟಿ ಅಧಿಕಾರಿಗಳು ಹಣ ಜಪ್ತಿ ಮಾಡುವ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿಸಿದ್ದಾರೆ.