ಕರ್ನಾಟಕ

karnataka

ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ಎಸ್​ಐಟಿಯಿಂದ ಮತ್ತೋರ್ವ ಆರೋಪಿ ಬಂಧನ - VALMIKI NIGAM SCAM

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯ ಬಂಧನ
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯ ಬಂಧನ (ETV Bharat)

By ETV Bharat Karnataka Team

Published : Jun 25, 2024, 10:19 AM IST

ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು‌ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿದ್ಧ ಸಾಯಿತೇಜ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿ ಸಾಯಿತೇಜ ಈ ಹಿಂದೆ ಬಂಧಿಸಲ್ಪಟ್ಟ ಸತ್ಯನಾರಾಯಣ ವರ್ಮಾನ ಸಹಚರನಾಗಿದ್ದು, ಹೈದರಾಬಾದ್​​ನ ಕೋ-ಆಪರೇಟಿವ್ ಬ್ಯಾಂಕ್​ವೊಂದರಲ್ಲಿ ನಕಲಿ ಖಾತೆ ತೆರೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಡೆತ್ ನೋಟಿನಲ್ಲಿ ಸಾಯಿತೇಜ ಹೆಸರನ್ನು ಉಲ್ಲೇಖಿಸಿದ್ದರು. ಸದ್ಯ ಸಾಯಿತೇಜನನ್ನು ಬೆಂಗಳೂರಿಗೆ ಕರೆತಂದಿರುವ ಎಸ್‌ಐಟಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದಿಟ್ಟು ಮೇ 26ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಚಂದ್ರಶೇಖರನ್ ಅವರ ಪತ್ನಿಯ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಲ್ಲದೇ ನಿಗಮದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆ‌‌ಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶಿಸಿತ್ತು.

ಇದನ್ನೂ ಓದಿ:ಚಂದ್ರಶೇಖರನ್​ ಆತ್ಮಹತ್ಯೆ ಕೇಸ್: ಇಬ್ಬರು ಆರೋಪಿಗಳು ಜು.3ರವರೆಗೆ ಸಿಐಡಿ ಕಸ್ಟಡಿಗೆ - VALMIKI NIGAM SCAM

ABOUT THE AUTHOR

...view details