ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅ. 3 ರಿಂದ 12ರ ವರೆಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ಅ. 3 ರಿಂದ ಅ.11ರ ವರೆಗೆ ನಾನಾ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ, ಕಲಾ ತಂಡಗಳಿಂದ ಆ. 27 ರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ.
ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು-570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಿಂಚಂಚೆ ಮೂಲಕವು ccdasara23@gamail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.