ಶಿವಮೊಗ್ಗ: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ - ಜುಲೈ 15ರಂದು ಬೆಳಗ್ಗೆ 11 ಗಂಟೆಯಿಂದ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಖಾಲಿಯಿರುವ ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.