ಮಂಗಳೂರು(ದಕ್ಷಿಣ ಕನ್ನಡ):ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್, ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್ ಮೆರಿಟ್ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಅವರು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.
ಈ ಬಗ್ಗೆ ಪ್ರಥಮ ರ‍್ಯಾಂಕ್ ಪಡೆದ ಅರ್ಜುನ್ ಕಿಶೋರ್ ಮಾತನಾಡಿ, ನೀಟ್‌ನಲ್ಲಿ ರ‍್ಯಾಂಕ್ ಬರುವ ನಿರೀಕ್ಷೆ ಇತ್ತು. ಆದರೆ ಮೊದಲ ರ‍್ಯಾಂಕ್ ಬರುತ್ತದೆ ಅಂದುಕೊಂಡಿರಲಿಲ್ಲ. ಮೊದಲ ರ‍್ಯಾಂಕ್ ಬಹಳ ಖುಷಿಕೊಟ್ಟಿದೆ. ದಿಲ್ಲಿಯ ಏಮ್ಸ್ ಸೇರುವ ಬಯಕೆ ನನಗೆ ಇದೆ ಎಂದು ತಿಳಿಸಿದ್ದಾರೆ.