ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 30 ಮಂದಿಗೆ ಗಾಯ - BUS OVERTURNED - BUS OVERTURNED

ಸಾಗರ ತಾಲೂಕಿನ ಮುಂಬಾಳು ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಸುಮಾರು 30 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.

bus-overturned
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ (ETV Bharat)

By ETV Bharat Karnataka Team

Published : Jun 9, 2024, 3:26 PM IST

Updated : Jun 9, 2024, 3:51 PM IST

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ (ETV Bharat)

ಶಿವಮೊಗ್ಗ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಮುಂಬಾಳು ತಿರುವಿನಲ್ಲಿ ನಡೆದಿದೆ.

ಸಾಗರದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ JRB ಎಂಬ ಖಾಸಗಿ ಬಸ್​ ಇಂದು ಬೆಳಗ್ಗೆ ಸಾಗರದಿಂದ ಶಿವಮೊಗ್ಗದ ಕಡೆ ಹೊರಟಿತ್ತು. ಈ ವೇಳೆ ಮಳೆಯು ಜೋರಾಗಿ ಬರುತ್ತಿದ್ದ ಪರಿಣಾಮ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್​ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು‌. ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿವೆ.

ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆನಂದಪುರಂ ಪ್ರಾಥ‌ಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಇನ್ನೂ ಕೆಲವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಯಾರಿಗೂ ಗಂಭೀರ ಗಾಯವಾಗಿಲ್ಲ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಚಿಕ್ಕಬಳ್ಳಾಪುರದಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು: ಮೂವರ ಸಾವು, ಒಬ್ಬನ ಸ್ಥಿತಿ ಗಂಭೀರ - Three died in Car accident

Last Updated : Jun 9, 2024, 3:51 PM IST

ABOUT THE AUTHOR

...view details