ಕರ್ನಾಟಕ

karnataka

ETV Bharat / state

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ಆರೋಪ: ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ - Arrest of suspected terrorist - ARREST OF SUSPECTED TERRORIST

ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.

ARREST OF SUSPECTED TERRORIST
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : May 15, 2024, 10:49 PM IST

ಬೆಂಗಳೂರು:ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬುಧವಾರ ಬಂಧಿಸಿದೆ. ತಮಿಳುನಾಡು ಮೂಲದ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ.

2014ರಲ್ಲಿ ಚೆನ್ನೈನ ಯುಎಸ್ ರಾಯಭಾರ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿಯ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೇಕಾಗಿದ್ದ. ಬುಧವಾರ ಮೈಸೂರಿನ ರಾಜೀವನಗರದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಮನೆಯಲ್ಲಿ 1 ಡ್ರೋನ್, ಮೊಬೈಲ್, ಲ್ಯಾಪ್‌ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊಲಂಬೋದಲ್ಲಿ ಇರುವ ಪಾಕಿಸ್ತಾನಿ ಹೈಕಮೀಷನ್ ಕಚೇರಿನಲ್ಲಿ ಉದ್ಯೋಗಿ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ನೂರುದ್ದೀನ್, 2023ರ ಆಗಸ್ಟ್‌ನಲ್ಲಿ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನಂತರ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಗೈರಾಗಿದ್ದ. ಆದ್ದರಿಂದ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಸಹ ಜಾರಿಯಾಗಿತ್ತು. ಸುಳಿವು ನೀಡಿದವರಿಗೆ 5 ಲಕ್ಷ ರೂ.ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು.

ಶ್ರೀಲಂಕಾದ ಪ್ರಜೆ ಮುಹಮ್ಮದ್ ಸಕೀರ್ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ನೂರುದ್ದೀನ್, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್‌ಐಎ ತನಿಖೆಯಲ್ಲಿ ಬಹಿರಂಗವಾಗಿತ್ತು. ಇದೀಗ ತನಿಖೆ ಮುಂದುವರಿಯಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

ಇದನ್ನೂ ಓದಿ:ಭಯೋತ್ಪಾದನೆಗೆ ಪಿತೂರಿ ಪ್ರಕರಣ: ಐವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್​ - Terrorism Conspiracy Case

ABOUT THE AUTHOR

...view details