ಹುಬ್ಬಳ್ಳಿ:ನಗರದ ಹಳೇ ಕೋರ್ಟ್ ಸರ್ಕಲ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ಕಾಮಗಾರಿ ವೇಳೆ ಕಬ್ಬಿಣದ ಪೈಪ್ ತಲೆ ಮೇಲೆ ಬಿದ್ದ ಪರಿಣಾಮ ಎಎಸ್ಐ ನಾಭಿರಾಜ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ಫ್ಲೈಓವರ್ ಪ್ರಾಜೆಕ್ಟ್ನ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳುತ್ತಿದ್ದ ಖಾಸಗಿ ಕಂಪನಿಯ ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಆಗಿದ್ದ ಹರಿಯಾಣ ರಾಜ್ಯದ ವಿಕಾಸ್ ಶರ್ಮಾ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹು-ಧಾ ಕಾನೂನು ವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಈಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ.
ನಾಭಿರಾಜ್ ಅವರು ಕರ್ತವ್ಯದಲ್ಲಿದ್ದಾಗ ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ, ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ, ನೌಕರರ ನಿರ್ಲಕ್ಷ ದಿಂದ ಕಬ್ಬಿಣ ಕಬ್ಬಿಣದ ರಾಡ್ವೊಂದು ಎಎಸ್ಐ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆಗೆ ಬಲವಾದ ಏಟು ಬಿದ್ದ ಕಾರಣ ಕೋಮಾಗೆ ಜಾರಿದ್ದ ನಾಭಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಬಗ್ಗೆ ದೂರು ದಾಖಲಾಗಿ ತನಿಖೆಯಲ್ಲಿತ್ತು. ಪ್ರಕರಣ ಸಂಬಂಧ ಈಗಾಗಲೇ ಖಾಸಗಿ ಕಂಪನಿಯ ಮೂವರು ಇಂಜಿನಿಯರ್ ಸೇರಿ 11 ಜನ ನೌಕರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜಪಡಿಸಲಾಗಿದೆ.
ಇದನ್ನೂ ಓದಿ: ಫ್ಲೈಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ಸಾವು: ನೇತ್ರದಾನ, ಸಾವಿನಲ್ಲೂ ಸಾರ್ಥಕತೆ - ASI died
ಮೃತ ನಾಭಿರಾಜ್ ನೇತ್ರಗಳನ್ನು ದಾನ ಮಾಡುವ ಮೂಲಕ ಎಎಸ್ಐ ನಾಭಿರಾಜ್ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ. ನಾಭಿರಾಜ್ ಇತ್ತೀಚಿಗೆ ಒಂದು ದಿನವೂ ರಜೆ ಹಾಕದೆ ಕರ್ತವ್ಯ ನಿರ್ಹಿಸುತ್ತಿದ್ದರು. ಕಣ್ಣು ದಾನ ಮಾಡಬೇಕು ಎನ್ನುವುದು ಅವರ ಇಚ್ಛೆ ಆಗಿತ್ತು.