ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಕೆಲಸಗಾರರೇ ಹಿಡಿದು ಥಳಿಸಿದ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಈ ಪೈಕಿ ಓರ್ವ ಸಾವನ್ನಪ್ಪಿದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಂಜನಾಪುರದ ಸಲ್ಮಾನ್ ಸಾವನ್ನಪ್ಪಿರುವ ವ್ಯಕ್ತಿ. ಸಲೀಂ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತದೇವವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.