ಮೈಸೂರು:ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜಾ ಕೈಕಂರ್ಯಗಳು ಆರಂಭವಾಗಿವೆ. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಅವುಗಳನ್ನು ಮಂಗಳವಾದ್ಯದೊಂದಿಗೆ ಅರಮನೆಗೆ ತೆಗೆದುಕೊಂಡು ಹೋಗಲಾಯಿತು.
ಬೆಳಗ್ಗೆಯಿಂದಲೇ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ, ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಪುರಾತನ ರಾಜವಂಶಸ್ಥರು ಬಳಸುತ್ತಿದ್ದ ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ತೆಗೆದುಕೊಂಡು ಹೋಗಿ ಸ್ವಚ್ಚಗೊಳಿಸಲಾಯಿತು. ಬಳಿಕ ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಇಟ್ಟು ಪಟ್ಟದ ಆನೆ, ಪಟ್ಟದ ಹಸು ಜತೆಗೆ ಮಂಗಳವಾದ್ಯಗಳ ಮೂಲಕ ಆಯುಧಗಳನ್ನು ಕಲ್ಯಾಣ ಮಂಟಪಕ್ಕೆ ತೆಗೆದುಕೊಂಡು ಹೋಗಿ ಇಡಲಾಯಿತು.