ಶಿವಮೊಗ್ಗ:ಮಂಡ್ಯ ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ ಅಂತಿಮವಾಗಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ ಚರ್ಚೆಯಲ್ಲಿದೆ ಎಂದರು.
ಲೋಕಸಭೆ ಚುನಾವಣೆ: ಮಂಡ್ಯ ಟಿಕೆಟ್ ಅಂತಿಮವಾಗಿಲ್ಲ-ಯಡಿಯೂರಪ್ಪ - ಜೆಡಿಎಸ್
ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಟಿಕೆಟ್ ಹಂಚಿಕೆ ಇನ್ನೂ ತೀರ್ಮಾನವಾಗಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Published : Jan 28, 2024, 10:38 AM IST
|Updated : Jan 28, 2024, 12:55 PM IST
ಇಂಡಿಯಾ ಮೈತ್ರಿಕೂಟ ಛಿದ್ರ: ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಂಡ್ಯ ಜಿಲ್ಲೆಗೆ ತೆರಳುತ್ತಿದ್ದೇನೆ. ಜಿಲ್ಲೆಯಲ್ಲಿ ನನಗೆ, ದೇವೇಗೌಡರಿಗೆ ಹಾಗೂ ಎಸ್ಎಂ ಕೃಷ್ಣ ಅವರಿಗೆ ಸನ್ಮಾನ ಕಾರ್ಯಕ್ರಮವಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಶೆಟ್ಟರ್ ಬೆಳೆಗಾವಿಯಿಂದ ಸ್ಪರ್ಧಿಸಿದರೆ, ಅಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಪ್ರಮುಖವಾಗುತ್ತೆ: ಸತೀಶ್ ಜಾರಕಿಹೊಳಿ