ಕರ್ನಾಟಕ

karnataka

ETV Bharat / state

ಈಗಿರುವ ಎಲ್ಲ ಸಮಸ್ಯೆಗಳನ್ನು ಪಕ್ಷದ ನಾಯಕರು ಬಗೆಹರಿಸುವ ವಿಶ್ವಾಸವಿದೆ: ಬಿ ವೈ ರಾಘವೇಂದ್ರ - Lok Sabha Election

ಚಿತ್ರದುರ್ಗದಲ್ಲಿ ಬೋವಿ ಮಠಕ್ಕೆ ಇಂದು ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

B Y Raghavendra spoke to the media.
ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದರು.

By ETV Bharat Karnataka Team

Published : Mar 23, 2024, 6:51 PM IST

Updated : Mar 23, 2024, 9:23 PM IST

ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿತ್ರದುರ್ಗ:ಕುಟುಂಬ ರಾಜಕಾರಣವನ್ನು ನಾನೂ ಸಹ ವಿರೋಧಿಸುತ್ತೇನೆ. ಬಿ ಎಸ್ ವೈ ಅವರು ಚುನಾವಣೆ ರಾಜಕೀಯದಿಂದ ನಿವೃತ್ತ ರಾಗಿದ್ದಾರೆ. ನಾನು ಎಬಿವಿಪಿಯಿಂದ ಬಂದು ಸಂಸದನಾಗಿದ್ದೇನೆ. ಯಾವುದೋ ಒತ್ತಡಕ್ಕಾಗಿ ನನಗೆ ಪಕ್ಷ ಟಿಕೆಟ್ ನೀಡಿಲ್ಲ. ಜನರ ವಿಶ್ವಾಸ ಗಳಿಸಿದ್ದೇನೆ, ಪ್ರಾಮಾಣಿಕ ಕೆಲಸ ಮಾಡಿದ್ದರಿಂದ ನನಗೆ ಹೈಕಮಾಂಡ್ ಟಿಕೆಟ್ ನೀಡಿದೆ ಎಂದು ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹೇಳಿದರು.

ಚಿತ್ರದುರ್ಗದಲ್ಲಿ ಬೋವಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಂಸದರು, ರಾಜ್ಯಾಧ್ಯಕ್ಷ ಸ್ಥಾನ ಸಂಘಟನೆಗೆ ಶಕ್ತಿ ತುಂಬುವ ಜವಾಬ್ದಾರಿಯನ್ನು ವಿಜಯೇಂದ್ರ ಅವರು ಮಾಡುತ್ತಿದ್ದಾರೆ. ಅಧ್ಯಕ್ಷ ಸ್ಥಾನದ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ, ಪಕ್ಷದ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದರು.

ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಗೀತಕ್ಕ, ರಾಘಣ್ಣ ಅವರ ಮಧ್ಯ ನಡೆಯುವ ಚುನಾವಣೆ ಅಲ್ಲ. ಎರಡು ಪಕ್ಷಗಳ ಸಿದ್ಧಾಂತದ ಮೇಲೆ ನಡೆಯುತ್ತಿರುವ ಚುನಾವಣೆ. ಎದುರಾಳಿ ಯಾರೆಂದು ನಾವು ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿ ಹೆಮ್ಮರವಾಗಿ ಬೆಳೆದಿದೆ. ಸುಲಭವಾಗಿ ಎದುರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೈ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ನೀಡ್ತಿದ್ದಾರೆಂದು ಸಿಎಂ ಆರೋಪ ವಿಚಾರಕ್ಕೆ ಪ್ರತಿಕ್ರಿಯೆಸಿದ ಅವರು, ಪಾಪ ಸಿಎಂ ಅವರಿಗೆ ಗ್ಯಾರಂಟಿ ಉಳಿಸಿಕೊಳ್ಳಲು ಆಗ್ತಿಲ್ಲ. ಕೈ ಶಾಸಕರಿಗೂ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಮುಖ ತೋರಿಸಲು ಆಗುತ್ತಿಲ್ಲ. ಅವರ ತಪ್ಪು ಮುಚ್ಚಿಕೊಳ್ಳಲು ಸಿಎಂ ಅವರು ಇನ್ನೊಬ್ಬರ ಕಡೆಗೆ ಬೆರಳು ತೋರುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಚಿತ್ರದುರ್ಗ ಕಲ್ಲಿನಕೋಟೆ ಇದು, ಹಾಗಾಗಿ ಕಠಿಣ ನಿರ್ಣಯವನ್ನು ಪಕ್ಷ ತೆಗೆದುಕೊಳ್ಳಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಇನ್ನೆರಡು ದಿನಗಳಲ್ಲಿ ಚಿತ್ರದುರ್ಗ ಸೇರಿ ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ನಾಯಕರು ಬಿಡುಗಡೆ ಮಾಡಲಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಪಕ್ಷದಲ್ಲಿ ಎದ್ದಿರುವ ಬಂಡಾಯ ಯಾವ ರೀತಿ ಎಫೆಕ್ಟ್ ಆಗುತ್ತೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ನಾಯಕರು ಈಗಿರುವ ಎಲ್ಲ ಸಮಸ್ಯೆಗಳನ್ನು ನೂರಕ್ಕೆ ನೂರು ಬಗೆಹರಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಯಾವುದೋ ಒಂದು ಹಣ್ಣಿನ ಗಿಡ, ಮಾವಿನ ಮರದಲ್ಲಿ ಹಣ್ಣುಗಳಿದ್ದಾಗ ಕಲ್ಲುಗಳು ಬೀಳುವದು ಸಹಜ, ರಾಘವೇಂದ್ರ ಅವರು ಹಿರಿಯರಿಂದ ಆಶೀರ್ವಾದ ತೆಗೆದುಕೊಂಡು ಒಳ್ಳೆಯ ಕಾರ್ಯಗಳನ್ನು ಮಾಡಬೇಕು ಎನ್ನುವುದು ನಮ್ಮ ಸಂಕಲ್ಪವಾಗಿದೆ. ತಾಯಂದಿರು ಮಕ್ಕಳು ಹೊರಗಡೆಯಿಂದ ಮನೆಯೊಳಗೆ ಬಂದಾಗ ದೃಷ್ಟಿ ತೆಗೆದುಕೊಳ್ಳುವುದನ್ನು ತಾವು ನೋಡಿದ್ದೀರಿ. ಹಾಗೆ ದೃಷ್ಟಿ ತೆಗೆಸಿಕೊಳ್ಳಬೇಕು ಎಂದು ಚಿತ್ರದುರ್ಗದ ಶ್ರೀಗಳ ಸನ್ನಿಧಾನಕ್ಕೆ ಬಂದಿರುವೆ ಎಂದರು.

ಇದನ್ನೂ ಓದಿ:ಹಣವಿಲ್ಲದೇ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ: ಆರ್ ಅಶೋಕ್​ ವಾಗ್ದಾಳಿ

Last Updated : Mar 23, 2024, 9:23 PM IST

ABOUT THE AUTHOR

...view details