ಬೆಂಗಳೂರು:ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದೆ.
ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.
ನಿಯೋಗದಲ್ಲಿ ಕಾಗಿನೆಲೆ ಕನಕ ಪೀಠದ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮೀಜಿ, ಜಗದ್ಗುರು ಕುಂಚಿಟಿಗ ಮಹಾ ಸಂಸ್ಥಾನ ಮಠ ಹೊಸದುರ್ಗದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಚಿತ್ರದುರ್ಗದ ಮಾದರ ಚನ್ನಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮೀ, ಮಧುರೆ ಭಗಿರಥ ಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಶಿವಮೊಗ್ಗ ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಚಿತ್ರದುರ್ಗದ ಮಡಿವಾಳ ಗುರುಪೀಠದ ಬಸವ ಮಾಚಿದೇವ ಮಹಾಸ್ವಾಮೀಜಿ, ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಸರೂರು ವಿಜಯನಗರದ ಶಾಂತಮ್ಮಯ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಸಿದ್ದರಾಮಯ್ಯಗೆ ಹೈಕಮಾಂಡ್ ಬೆಂಬಲವಿದೆ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಮಹದೇವಪ್ಪ - Leadership Changes