ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲು ಬಳಿ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿನತ್ತ ಈ ಖಾಸಗಿ ಬಸ್ ಹೋಗುತ್ತಿತ್ತು. ಫರಂಗಿಪೇಟೆಯ 10ನೇ ಮೈಲಿಕಲ್ಲು ಬಳಿ ಪಲ್ಟಿಯಾಗಿದೆ. ಸದ್ಯ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.