ಬಳ್ಳಾರಿ: ವಾಕಿಂಗ್ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಯಾರೋ ದುಷ್ಕರ್ಮಿಗಳು ಇಂದು ಬೆಳಗ್ಗೆ ಅಪಹರಿಸಿರುವುದಾಗಿ ಅವರ ಸಹೋದರ ವೇಣು ಎಂಬುವರು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್ ಅಪಹರಣ (ETV Bharat) ವೈದ್ಯ ಸುನೀಲ್ ಅವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಸೂರ್ಯನಾರಾಯಣಪೇಟೆಯ ಶನೇಶ್ವರಗುಡಿ ಬಳಿ ಬರುತ್ತಿದ್ದಂತೆ ಟಾಟಾ ಇಂಡಿಗೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಸುನೀಲ್ ಅವರ ಬಾಯಿ ಮುಚ್ಚಿ ಕಾರಿನಲ್ಲಿ ಎಳೆದೊಯ್ದಿದ್ದಾರೆ ಎಂದು ಸಹೋದರ ವೇಣು ದೂರು ನೀಡಿದ್ದಾರೆ.
ಅಪಹರಣಕಾರರು ಭಾರೀ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ಅಪಹರಣದ ದೃಶ್ಯ (ETV Bharat) ಸಹೋದರ ವೇಣು ಅವರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರೂ ಆಗಿದ್ದಾರೆ. ವೈದ್ಯ ಸುನೀಲ್ ಅವರ ಮೊಬೈಲ್ನಿಂದ ವೇಣುಗೆ ಕರೆ ಮಾಡಿದ ಅಪಹರಣಕಾರರು ಭಾರಿ ಪ್ರಮಾಣದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ವೇಣು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ದೂರು ಪಡೆದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಈ ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸತ್ಯನಾರಾಯಣ ಪೇಟೆಯಲ್ಲಿರುವ ವೈದ್ಯ ಸುನೀಲ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರೊಂದಿಗೂ ಮಾತನಾಡಿದ ಜನಾರ್ದನ ರೆಡ್ಡಿ, ಕೂಡಲೇ ಅಪಹರಣಕಾರರನ್ನು ಹಿಡಿಯುವಂತೆ ಮನವಿ ಮಾಡಿದರು. ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿರುವುದಾಗಿ ಎಸ್ಪಿ ತಿಳಿಸಿದರು.
ಇದನ್ನೂ ಓದಿ:ಕಾರವಾರ:ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟ ಐವರು ಆರೋಪಿಗಳು ಅರೆಸ್ಟ್ - FIVE ARRESTED IN KIDNAP CASE