ಬೆಂಗಳೂರು:ಜನರಿಂದ ತುಂಬಿರುವ ಚರ್ಚ್ ಸ್ಟ್ರೀಟ್ನಲ್ಲಿ ಇನ್ನು ಮುಂದೆ ಚಲನಚಿತ್ರಗಳ ಶೂಟಿಂಗ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ಈ ಬಗ್ಗೆೆ ಮಾತನಾಡಿರುವ ಅವರು "ಚರ್ಚ್ ಸ್ಟ್ರೀಟ್ನಲ್ಲಿ ಚಲನಚಿತ್ರಗಳ ಚಿತ್ರೀಕರಣದಿಂದಾಗಿ ಸಂಚಾರ ದಟ್ಟಣೆಯುಂಟಾಗುತ್ತಿದ್ದು, ಇದರಿಂದ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಸೇರಿದಂತೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಜನನಿಬಿಡ ರಸ್ತೆಯಾಗಿರುವುದರಿಂದ ಸಿನಿಮಾ ಚಿತ್ರೀಕರಣದಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗುತ್ತದೆ" ಎಂದು ಹೇಳಿದ್ದಾರೆ.
ಅಲ್ಲದೆ "ಚರ್ಚ್ ಸ್ಟ್ರೀಟ್ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್ಸಿ ಅನುಮತಿ ನೀಡಲು ಸಾಧ್ಯವಿಲ್ಲ, ಅದೊಂದು ಜನನಿಬಿಡ ರಸ್ತೆ, ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ" ಎಂದಿದ್ದಾರೆ.