ಕರ್ನಾಟಕ

karnataka

ETV Bharat / state

ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಪ್ರಕರಣ, ತನಿಖೆಗೆ ತಂಡ ರಚನೆ - Feticide case - FETICIDE CASE

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ನೆಲಮಂಗಲದ ಖಾಸಗಿ ಆಸ್ಪತ್ರೆಗಳಲ್ಲಿ ನಡೆದಿರುವ ಭ್ರೂಣ ಹತ್ಯೆ,ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಯುಕ್ತರು ತನಿಖಾ ತಂಡ ರಚಿಸಿ ಆದೇಶಿಸಿದ್ದಾರೆ.

feticide case
ಭ್ರೂಣ ಹತ್ಯೆ ಪ್ರಕರಣ

By ETV Bharat Karnataka Team

Published : Mar 22, 2024, 9:00 PM IST

ಬೆಂಗಳೂರು:ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ನೆಲಮಂಗಲ ಪಟ್ಟಣಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ, ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕಷವಾಗಿ ಪರಿಶೀಲಿಸಲು ತನಿಖಾ ತಂಡ ರಚನೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಪಟ್ಟಣಗಳಲ್ಲಿ ಪಿಸಿ, ಪಿಎನ್‌ಡಿಟಿ ಮತ್ತು ಎಂಟಿಪಿ ಕಾಯ್ದೆ ಉಲ್ಲಂಘನೆ, ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ, ಕಾನೂನು ಬಾಹಿರ ಗರ್ಭಪಾತ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿ, ಅಹವಾಲುಗಳನ್ನು ಸಲ್ಲಿಸಿಕೊಂಡಿರುವುದರಿಂದ ಈ ಕುರಿತು ಕೂಲಂಕಷವಾಗಿ ಪರಿಶೀಲಿಸಿ, ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ತನಿಖಾ ತಂಡದಲ್ಲಿ ಯೋಜನಾ ನಿರ್ದೇಶಕರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕರು(ವೈದ್ಯಕೀಯ/ಪಿಸಿ ಪಿಎನ್‌ಡಿಟಿ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ತಂಡವು ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಎಲ್ಲ ಅಂಶಗಳ ಕುರಿತು ವಾಸ್ತವಾಂಶದ ತನಿಖೆ ನಡೆಸಿ ಸೂಕ್ತ ದಾಖಲೆಗಳೊಂದಿಗೆ ವಿವರವಾದ ವರದಿಯನ್ನು ಮಾ.26ರಂದು ಆಯುಕ್ತಾಲಯಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂಓದಿ:ಮಗು ದತ್ತು ಪಡೆದ ಪ್ರಕರಣ: ಸೋನುಗೌಡರನ್ನ ನಾಲ್ಕು ದಿನಗಳ ಕಸ್ಟಡಿಗೆ ಪಡೆದ ಪೊಲೀಸರು - ನಟಿ ಹೇಳಿದ್ದಿಷ್ಟು - violation of Hindu Adoption Act

ABOUT THE AUTHOR

...view details