ಕರ್ನಾಟಕ

karnataka

ETV Bharat / state

ಆನೇಕಲ್: ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ, ದೂರು ದಾಖಲು - ಆನೇಕಲ್

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

suicide
ಆತ್ಮಹತ್ಯೆ

By ETV Bharat Karnataka Team

Published : Jan 31, 2024, 5:33 PM IST

ಆನೇಕಲ್ (ಬೆಂಗಳೂರು): ಹೊಸರೋಡ್ ಬಳಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಮೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಘ್ನೇಶ್ ಕೆ (19) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.

ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ಆಗಿರುವ ವಿದ್ಯಾರ್ಥಿ ವಿಘ್ನೇಶ್ ಕೆ (19) ಖಾಸಗಿ ಕಾಲೇಜಿನಲ್ಲಿ ಬಿಬಿಎ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದನು. ಆದರೆ ನಿನ್ನೆ ಸಂಜೆ ಕಾಲೇಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ವಿದ್ಯಾರ್ಥಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಅಗ್ರಹಾರ ಠಾಣೆ ಪೊಲೀಸರು ಬಂದು ಪರಿಶೀಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂಓದಿ:ಜಮೀನು ವಿವಾದ: ಕಾರು ಗುದ್ದಿಸಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

ABOUT THE AUTHOR

...view details