ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗೇರಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ. ಮೃತರನ್ನು ನಾಗಶೆಟ್ಟಿಕೊಪ್ಪದ ನಿವಾಸಿ ಪ್ರಕಾಶ ಮಾನೆ ಎಂದು ಗುರುತಿಸಲಾಗಿದೆ.
ಪ್ರಕಾಶಗೆ ಬೆಂಗೇರಿಯ ಹನುಮಂತ ದೇವಸ್ಥಾನದ ಬಳಿ ಸ್ನೇಹಿತರಾದ ಕಿರಣ ಬಡಿಗೇರ ಹಾಗೂ ಸಂಗಮೇಶ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರಕಾಶನಿಗೆ ಚಾಕು ಇರಿದ ತಕ್ಷಣ ಸ್ಥಳೀಯರು ಆತನನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಆದರೆ ಅತಿಯಾದ ರಕ್ತಸ್ರಾವ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.