ಕರ್ನಾಟಕ

karnataka

ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ, ಫ್ಲೆಕ್ಸ್ ಹಾಕಿಸಿದ್ದಕ್ಕೆ ಗರಂ ಆದ ಡಿಸಿಎಂ - Parishad By Election

By ETV Bharat Karnataka Team

Published : Jul 11, 2024, 8:23 PM IST

ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಸನಗೌಡ ಬಾದರ್ಲಿ ಗುರುವಾರ ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Basanagowda Badarli Taking Oath As Parishad Member
ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸನಗೌಡ ಬಾದರ್ಲಿ (ETV Bharat)

ಬೆಂಗಳೂರು:ವಿಧಾನಸಭಾ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಚುನಾಯಿತರಾಗಿರುವ ಬಸನಗೌಡ ಬಾದರ್ಲಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರಳ ಸಮಾರಂಭದಲ್ಲಿ ವಿಧಾನಪರಿಷತ್​ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.

ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸನಗೌಡ ಬಾದರ್ಲಿ (ETV Bharat)

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಣ್ಣ ನೀರಾವರಿ ಸಚಿವ ಬೋಸರಾಜು ವಿಧಾನ ಪರಿಷತ್ ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸನಗೌಡ ಬಾದರ್ಲಿ (ETV Bharat)

ಫ್ಲೆಕ್ಸ್ ಹಾಕಿಸಿದ್ದಕ್ಕೆ ಡಿಸಿಎಂ ಗರಂ:ಬಸನಗೌಡ ಬಾದರ್ಲಿ ಅವರು ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾವಚಿತ್ರವಿರುವ ಶುಭ ಕೋರುವ ಫ್ಲೆಕ್ಸ್ ಹಾಕಿಸಿದ್ದಕ್ಕೆ ಶಿವಕುಮಾರ್ ಗರಂ ಆದರು.

ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸನಗೌಡ ಬಾದರ್ಲಿ (ETV Bharat)

ವಿಧಾನಸೌಧದಕ್ಕೆ ಆಗಮಿಸಿದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ತರಾಟೆಗೆ ತೆಗೆದುಕೊಂಡ ಡಿಕೆಶಿ, ಯಾರು ಫ್ಲೆಕ್ಸ್ ಹಾಕಿಸಿದ್ದು, ಕೇಸ್ ಹಾಕಿಸುತ್ತೇನೆ ಎಂದು ಗದರಿದರು. ಅಗ ನಲಪಾಡ್, ನಾನು ಫ್ಲೆಕ್ಸ್ ಹಾಕಿಸಿಲ್ಲ ಎಂದು ಸಮಜಾಯಿಷಿ ನೀಡಿದರು.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಹಗರಣ: ಇಡಿ ದಾಳಿ ಅವಶ್ಯಕತೆ ಇರಲಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್ - DCM D K Shivakumar

ABOUT THE AUTHOR

...view details