ಬೆಂಗಳೂರು:ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದ್ದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಸಿಐಡಿ ಎಸ್ಐಟಿ ಅಧಿಕಾರಿಗಳ ಮುಂದೆ ಇಂದು ಹಾಜರಾಗಿದ್ದಾರೆ. ಎಸ್ಐಟಿ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ವಾಲ್ಮೀಕಿ ನಿಗಮ ಅಕ್ರಮ: ಎಸ್ಐಟಿ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ದದ್ದಲ್ - Basanagowda Daddal - BASANAGOWDA DADDAL
ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಬಸನಗೌಡ ದದ್ದಲ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ, ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
Published : Jul 12, 2024, 12:18 PM IST
ದದ್ದಲ್‍ಗಾಗಿ ಇಡಿ ಶೋಧ:ಪ್ರಕರಣದಲ್ಲಿ ಶಾಸಕ ಬಸನಗೌಡ ದದ್ದಲ್ ಅವರಿಗಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಾಕಷ್ಟು ಹುಡುಕಾಟ ನಡೆಸಿದ್ದರು. ಬಂಧನದ ಭೀತಿ ಎದುರಿಸುತ್ತಿರುವ ಅವರು ದಿಢೀರ್ ನಾಪತ್ತೆಯಾಗಿದ್ದರು. ದದ್ದಲ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು, ಇಂದು ಮುಂಜಾನೆ ಯಲಹಂಕದ ನಿವಾಸಕ್ಕೂ ಅಧಿಕಾರಿಗಳು ಭೇಟಿ ನೀಡಿದ್ದರು. ಅಲ್ಲಿ ಶಾಸಕರು ಇರದಿದ್ದರಿಂದ ಅವರ ಸರ್ಕಾರಿ ನಿವಾಸಕ್ಕೂ ತೆರಳಿ ಶೋಧಿಸಿದ್ದರು. ನಂತರ ಶಾಸಕರು ಸ್ವಕ್ಷೇತ್ರ ರಾಯಚೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಅತ್ತ ಪ್ರಯಾಣಿಸಿದ್ದರು.
ಇದನ್ನೂ ಓದಿ:ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ - ED Detained B Nagendra