ಬೆಳಗಾವಿ:ಲಿಂಗಾಯತರ ವಿರುದ್ಧ ಸಿಎಂ ಸಿದ್ದರಾಮಯ್ಯ ಹೃದಯಹೀನರಾಗಿ ನಡೆದುಕೊಂಡಿದ್ದಾರೆ. ನೀವು ಅಧಿಕಾರಕ್ಕೆ ಬರಲು ನಾವು ಆಶೀರ್ವಾದ ಮಾಡಿದ್ದೆವು. ಅದಕ್ಕೆ ಪ್ರತಿಯಾಗಿ ನಮ್ಮನ್ನೇ ಹೊಡೆದಿದ್ದೀರಿ. ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಇಂದು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಮತ್ತೆ ಧರಣಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದರು.
ಲಾಠಿಚಾರ್ಜ್ ನಡೆಸಿದಾಗ ನಮ್ಮ ಸಮಾಜದ ಒಬ್ಬ ಶಾಸಕರು ಮುಖ್ಯಮಂತ್ರಿ ಬಳಿ ಹೋಗಿ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಲಾಠಿಚಾರ್ಜ್ ನಿಲ್ಲಿಸಿ ಎಂದು ಕೇಳಿದ್ದಾರೆ. ಆದರೆ, ಇದಕ್ಕೆ ಸಿದ್ದರಾಮಯ್ಯನವರು, ಏಯ್ ಹೊಡೀಲಿ ಬಿಡ್ರೀ, ಅವರು ನಮ್ಮನ್ನೇ ಹೆದರಿಸುತ್ತಾರೆಯೇ? ನಮ್ಮ ಬಳಿಯೂ ಲಾಠಿ ಇದೆ ಎಂದು ಹೇಳಿದ್ದರು. ಈ ವಿಷಯವನ್ನು ಶಾಸಕರೇ ಬಂದು ನನಗೆ ಹೇಳಿದ್ದಾರೆ. ಸುವರ್ಣ ವಿಧಾನಸೌಧದ ಸಿಸಿಟಿವಿ ಕ್ಯಾಮೆರಾಗಳನ್ನು ತಪಾಸಣೆ ಮಾಡಿ ಖಾತ್ರಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.