ರಾಯಚೂರು:ಕಾಂಗ್ರೆಸ್ನ ನೂತನ ಜಿಲ್ಲಾಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ಪದಗ್ರಹಣ ಮಾಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು. ಸಮಾರಂಭಕ್ಕೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಿ.ಕುಮಾರ ನಾಯಕ, ಸಚಿವ ಎನ್.ಎಸ್.ಬೋಸರಾಜು ಹಾಗೂ ಅವರ ಬೆಂಬಲಿಗರು ಗೈರಾಗಿರುವುದು ಅಸಮಾಧಾನದ ಸುಳಿವು ನೀಡಿದೆ.
ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಜಿಲ್ಲಾಧ್ಯಕ್ಷರಾಗಿದ್ದ ಬಿ.ವಿ.ನಾಯಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಒಂದು ವರ್ಷದ ಬಳಿಕ ಹೈಕಮಾಂಡ್ ರಾಯಚೂರು ಜಿಲ್ಲಾಧ್ಯಕ್ಷರಾನ್ನಾಗಿ ಇಟಗಿ ಅವರನ್ನು ನೇಮಿಸಿದೆ.