ಚಿತ್ರದುರ್ಗ:ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾಮಗಾರಿ ಬಿಲ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಇವರು ಕಾಮಗಾರಿಯ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಡಳಿಯ ಕಚೇರಿಯಲ್ಲಿ ಸೋಮವಾರ 4 ಲಕ್ಷ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.