ಬೆಂಗಳೂರು:ಭಾರೀ ಗಾತ್ರದ ಫ್ಲೆಕ್ಸ್ ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಈ ಘಟನೆ ನಡೆದ ಸ್ಥಳ ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಪಷ್ಟನೆ ನೀಡಿದೆ.
ಫ್ಲೆಕ್ಸ್ ಮುರಿದು ಬಿದ್ದು ವ್ಯಕ್ತಿಗೆ ಗಂಭೀರ ಗಾಯ: ಸ್ಪಷ್ಟನೆ ನೀಡಿದ ಬಿಬಿಎಂಪಿ - BBMP Clarification - BBMP CLARIFICATION
ಬೃಹತ್ ಗಾತ್ರದ ಫ್ಲೆಕ್ಸ್ ಮುರಿದು ಬಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಈ ಕುರಿತು ಬಿಬಿಎಂಪಿ ಸ್ಪಷ್ಟನೆ ನೀಡಿ, ಘಟನೆ ನಡೆದ ಸ್ಥಳ ನಮ್ಮ ವ್ಯಾಪ್ತಿಯಲ್ಲಿ ಇಲ್ಲ ಎಂದು ತಿಳಿಸಿದೆ.
ಬಿಬಿಎಂಪಿ (ETV Bharat)
Published : Jul 7, 2024, 3:27 PM IST
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಲಾಗುತ್ತಿದೆ. ಜೊತೆಗೆ, ಎಫ್ಐಆರ್ ದಾಖಲಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ವಿಜಯಪುರ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಚಹಾ ಕುಡಿಯಲು ಹೋಗಿ ಕಾರ್ಮಿಕರು ಬಚಾವ್ - Boiler Blast