ಬಿಬಿಎಂಪಿ ಗುತ್ತಿಗೆದಾರ (ETV Bharat) ಬೆಂಗಳೂರು:ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಒತ್ತಾಯಿಸುವುದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬುವರು ದೂರು ನೀಡಿದ್ದಾರೆ.
ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಚೆಲುವರಾಜು, ''ಲಕ್ಷ್ಮೀದೇವಿನಗರ ವಾರ್ಡ್ನಲ್ಲಿನ ಡಿ.ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದ ಘನತಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ ನಿರ್ವಹಣೆಯನ್ನು 2019ರಿಂದ ಟೆಂಡರ್ ಪಡೆದು ಕಾರ್ಯ ನಿರ್ವಹಿಸುತ್ತಿದ್ದೇನೆ. 2021ರಲ್ಲಿ ಬಿಬಿಎಂಪಿಗೆ ಶಿಫಾರಸು ಮಾಡಿ 10 ಕಸದ ಆಟೋ ಕೊಡಿಸುವುದಾಗಿ ಭರವಸೆ ನೀಡಿ, ನನ್ನಿಂದ 20 ಲಕ್ಷ ರೂ. ಪಡೆದುಕೊಂಡಿದ್ದಾರೆ. ಆದರೆ ಆಟೋ ಕೊಡಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಅಸಭ್ಯವಾಗಿ ವರ್ತಿಸಿದ್ದಾರೆ'' ಎಂದು ದೂರಿದ್ದಾರೆ.
''ತದನಂತರದ ದಿನಗಳಲ್ಲಿ ನಿರಂತರವಾಗಿ ಲಂಚ ನೀಡುವಂತೆ ಒತ್ತಾಯಿಸಿದ್ದರು. ಹಣ ನೀಡದಿದ್ದಾಗ ಶಾಸಕರ ಸಹಚರರು ರೇಣುಕಾಸ್ವಾಮಿ ಕೊಲೆಯಾಗಿರುವ ರೀತಿಯಲ್ಲಿ ನಿನ್ನನ್ನೂ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ'' ಎಂದು ಚೆಲುವರಾಜು ಆರೋಪಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ 906 ಸಂಗಾತಿ, ಪ್ರೇಮಿಗಳ ಹತ್ಯೆ: ಇಲ್ಲಿದೆ ಬೆಚ್ಚಿಬೀಳಿಸುವ ಅಂಕಿ - ಅಂಶಗಳು! - MURDERS IN KARNATAKA