ಕರ್ನಾಟಕ

karnataka

ETV Bharat / state

ದಸರಾ- ದೀಪಾವಳಿ ಹಬ್ಬದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ನಿರ್ವಹಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ - BBMP GUIDELINES

ಮಾರುಕಟ್ಟೆಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ವಸ್ತುಗಳನ್ನು ಮಾರಾಟ ಮಾಡಲು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ವ್ಯಾಪಾರಿಗಳಿಗೆ ತಿಳಿಸಲಾಗಿದೆ.

BBMP Guideline for Festival waste mangament
ಬಿಬಿಎಂಪಿ (ETV Bharat)

By ETV Bharat Karnataka Team

Published : Oct 10, 2024, 12:51 PM IST

ಬೆಂಗಳೂರು: ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನಲೆ ಮಹಾನಗರದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಮೂಲಕ ನಗರದ ಸೌಂದರ್ಯವನ್ನು ಕಾಪಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾರ್ಗಸೂಚಿಯನ್ನು ಹೊರಡಿಸಿದೆ.

ನಗರದ ವ್ಯಾಪ್ತಿಯಲ್ಲಿ ಕಂಡು ಬರುವ ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ಅದರಲ್ಲೂ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಲು ಅರಿವು ಮೂಡಿಸಲಾಗಲಿದೆ. ಮಾರುಕಟ್ಟೆಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಸಾಮಾನುಗಳನ್ನು ಮಾರಾಟ ಮಾಡಲು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ವ್ಯಾಪಾರಿಗಳಿಗೆ ತಿಳಿಸಲಾಗಿದೆ. ಹಾಗೇ, ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳ ಮತ್ತು ಮಾರ್ಷಲ್‌ಗಳು ತಂಡಗಳನ್ನು ರಚಿಸಿ ದಿನಂಪ್ರತಿ ಪರಿವೀಕ್ಷಣೆ ನಡೆಸಲಾಗುವುದು. ಪ್ಲಾಸ್ಟಿಕ್ ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು.

ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಅಂದಾಜಿಸಿ ಅದನ್ನು ಸಂಪೂರ್ಣವಾಗಿ ಸಂಗ್ರಹಿಸಿ, ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು. ಬ್ಲಾಕ್‌ಸ್ಪಾಟ್‌ (ಕಸ ಸುರಿಯುವ ಸ್ಥಳ)ಗಳಲ್ಲಿ ತ್ಯಾಜ್ಯ ಶೇಖರಣೆಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸಲಾಗುವುದು. ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣವಾಗುವ ಬ್ಲಾಕ್ ಸ್ಪಾಟ್‌ ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮವಹಿಸಲಾಗುವುದು.

ಮಾರುಕಟ್ಟೆ ಹಾಗೂ ಇತರೆ ಪ್ರದೇಶಗಳಲ್ಲಿ ಬಾಳೇಕಂದು, ಮಾವಿನ ಎಲೆ, ಹೂವು ಮತ್ತು ಇತರೆ ಹಸಿ ತ್ಯಾಜ್ಯವನ್ನು ಆದ್ಯತೆ ಮೇರೆಗೆ ವಾರ್ಡ್‌ಗಳಲ್ಲಿಯೇ ಹಸಿ/ ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ವಿಲೇವಾರಿ ಮಾಡುವುದು ಅಥವಾ ವಾರ್ಡ್‌ಗಳಲ್ಲಿ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದಲ್ಲಿ ಅಲ್ಲಿಗೆ ಕಳುಹಿಸಿಕೊಡಲಾಗುವುದು. ಹಬ್ಬದ ದಿನಗಳಂದು ಉತ್ಪತ್ತಿಯಾಗುವ ಬಾಳೇಕಂದು, ಮಾವಿನ ಎಲೆ ಹಾಗೂ ಇತರೆ ಹಸಿರು ತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಇರುವ ಶೆಡ್ಡರ್ಸ್ಗೆ ವಿಲೇವಾರಿ ಮಾಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ದಸರಾ ಕುಸ್ತಿ: ದಾವಣಗೆರೆಯ ಬಸವರಾಜ್​ 'ದಸರಾ ಕೇಸರಿ', ಹಳಿಯಾಳದ ಶಾಲಿನಿ 'ದಸರಾ ಕಿಶೋರಿ'

ABOUT THE AUTHOR

...view details