ಕರ್ನಾಟಕ

karnataka

ETV Bharat / state

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ ಗಡುವು ಒಂದು ದಿನದ ಮಟ್ಟಿಗೆ ವಿಸ್ತರಿಸಿದ ಪಾಲಿಕೆ - Kannada nameplate

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ ಗಡುವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆ
ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆ

By ETV Bharat Karnataka Team

Published : Feb 29, 2024, 6:58 AM IST

ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಯ ಗಡುವನ್ನು ಒಂದು ದಿನ ವಿಸ್ತರಣೆ ಮಾಡಲಾಗಿದ್ದು, ಗಡುವು ವಿಸ್ತರಿಸಿದರೂ ಕನ್ನಡ ಬಳಸದ ಅಂಗಡಿಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶದಲ್ಲಿ ತಿಳಿಸಿದ್ದಾರೆ.

ಕಾಲಾವಕಾಶ ಬುಧವಾರಕ್ಕೆ ಮುಗಿದಿದ್ದರೂ ಕೂಡಾ ಅಂಗಡಿ ಮುಂಗಟ್ಟುಗಳ ಮುಂದಿನ ನಾಮಫಲಕಗಳು ಬದಲಾವಣೆಯಾಗಿಲ್ಲ. ಈ ಹಿನ್ನೆಲೆ ಮತ್ತೂಂದು ದಿನ ಅವಕಾಶ ನೀಡಲಾಗಿದೆ. ಗುರುವಾರ ಸಂಜೆಯ ವೇಳೆಗೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್​ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಶೆ.60ಷ್ಟು ನಾಮಫಲಕಗಳನ್ನು ಬದಲಾವಣೆ ಮಾಡದಿದ್ದರೆ ಉದ್ದಿಮೆಗಳ ಪರವಾನಗಿಯನ್ನು ಅಮಾನತುಗೊಳಿಸಲು ಹಾಗೂ ಬೀಗ ಮುದ್ರೆ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅಂಕಿ-ಸಂಖ್ಯೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ.28ರೊಳಗಡೆ ಸುಮಾರು 55,187 ವಾಣಿಜ್ಯ ಮಳಿಗೆ/ಉದ್ದಿಮೆಗಳಿಗೆ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿಕೊಳ್ಳಲು ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ, ಫೆಬ್ರವರಿ 28ರ ವರೆಗೆ 52,134 ವಾಣಿಜ್ಯ ಉದ್ದಿಮೆಗಳು ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅನುಷ್ಠಾನಗೊಳಿಸಿದ್ದು, 3044 ವಾಣಿಜ್ಯ ಉದ್ದಿಮೆಗಳು ಇನ್ನೂ ಅನುಷ್ಠಾನಗೊಳಿಸದ ಹಿನ್ನೆಲೆ ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಸಹ ಸೂಚನೆ ನೀಡಿದ್ದಾರೆ.

ಫೆ.29ರಿಂದ ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತುಗೊಳಿಸಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ ಹಾಕಲು ಪಾಲಿಕೆಯ ಆರೋಗ್ಯ ವಿಭಾಗದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಶೇ.60ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕಲು 3,385 ವ್ಯಾಪಾರಿಗಳ ನಿರ್ಲಕ್ಷ್ಯ

ABOUT THE AUTHOR

...view details