ಕರ್ನಾಟಕ

karnataka

ETV Bharat / state

ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಪಾಲಿಕೆ - Ganesha Festival Celebration

ಗಣೇಶ ಚತುರ್ಥಿ ಆಚರಣೆ ಹಿನ್ನೆಲೆ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಅನುಮತಿ ನೀಡಲು 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆದಿದೆ.

ಬಿಬಿಎಂಪಿ
ಬಿಬಿಎಂಪಿ (ETV Bharat)

By ETV Bharat Karnataka Team

Published : Sep 5, 2024, 11:04 PM IST

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್​​ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್​ಗಳಲ್ಲಿ ಮಾಡಲಾಗಿದೆ.

ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ವೆಬ್ ಸೈಟ್ ಲಿಂಕ್ https://apps.bbmpgov.in/ganesh2024/ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಸಾವಿರಾರು ಮಣ್ಣಿನ ಗಣೇಶ ವಿತರಣೆ:ಬಾಂಧವ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ಎಲ್.ಐ.ಸಿ.ಕಾಲೋನಿ ಉದ್ಯಾನವನದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಜೇಡಿ ಮಣ್ಣಿನ ಗಣೇಶ ವಿತರಣೆ ಕಾರ್ಯಕ್ರಮ ಗುರುವಾರ ನೆಡೆಯಿತು.

ಮಾಜಿ ಶಾಸಕಿ, ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಆಡಳಿತ ಪಕ್ಷದ ಮಾಜಿ ನಾಯಕ ಮತ್ತು ಜಯನಗರ ಗ್ಯಾರೆಂಟಿ ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಈ ಸಂದರ್ಭದಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ಸಾರ್ವಜನಿಕರಿಗೆ ವಿತರಿಸಿದರು.

ಕಾರ್ಯಕ್ರಮದಲ್ಲಿ ಎನ್.ನಾಗರಾಜು ಮಾತನಾಡಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾರ್ಗದರ್ಶನದಲ್ಲಿ ಬೈರಸಂದ್ರ ವಾರ್ಡ್​ನಲ್ಲಿ 9 ವರ್ಷದಿಂದ ಕೆರೆಯಿಂದ ಜೇಡಿ ಮಣ್ಣಿನಿಂದ ತಯಾರಿಸಿದ ಗೌರಿ, ಗಣೇಶ ಮೂರ್ತಿಗಳನ್ನು ಬಾಂಧವ ಸಂಸ್ಥೆ ವತಿಯಿಂದ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ಪರಿಸರ ಜಾಗೃತಿ ಅಭಿಯಾನದ ಜೊತೆಯಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಣೆ ಪ್ರಯುಕ್ತ ಸಾವಿರಾರು ಜೇಡಿ ಮಣ್ಣಿನ ಗಣೇಶ ಮೂರ್ತಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ ಎಂದು ಹೇಳಿದರು.

ಬಾಂಧವ ಸಂಸ್ಥೆ ಕಲೆ, ಸಾಹಿತ್ಯ, ಮಕ್ಕಳ ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಹ ಸಹಕಾರ ನೀಡುತ್ತಾ ಬಂದಿದೆ. ಹಿಂದೂ, ಮುಸ್ಲಿಂ, ಕಿಶ್ಚಿಯನ್ ಎಲ್ಲ ಸಮುದಾಯದವರು ಒಟ್ಟಾಗಿ ಸೇರಿ ನಮ್ಮ ವಾರ್ಡ್ ನಲ್ಲಿ ಗಣೇಶ ಹಬ್ಬ ಅಚರಿಸುವುದು ವಿಶೇಷವಾಗಿದೆ.ಈ ಹಿನ್ನಲೆಯಲ್ಲಿ ಪರಿಸರ ಉಳಿದರೆ ಮಾತ್ರ ಮನುಷ್ಯ ಉಳಿಯಲು ಸಾಧ್ಯ, ಮುಂದಿನ ಜನಾಂಗಕ್ಕೆ ಪರಿಸರ ನಾಶ ಮಾಡದೇ ಉಳಿಸಬೇಕು ಎಂಬ ಉದ್ದೇಶದಿಂದ ಭಾಂಧವ ಸಂಸ್ಥೆ ಶ್ರಮಿಸುತ್ತಿದೆ ಎಂದರು.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಮತ್ತು ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಕುಟುಂಬಗಳಿಗೆ ತಲುಪಿದೆ. ರಾಜ್ಯದ ಜನರು ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಅಭೂತಪೂರ್ವ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಗಣೇಶ ಹಬ್ಬ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ನೆಮ್ಮದ್ದಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನುಡಿದರು.

ಇದನ್ನೂ ಓದಿ:ಗೌರಿ -ಗಣೇಶ ಹಬ್ಬ ಹೇಗೆ ಆಚರಿಸಬೇಕು; ಅರ್ಚಕರ ಸಂದರ್ಶನ - Priest Interview

ABOUT THE AUTHOR

...view details