ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ಗಳನ್ನು ಆಯಾ ವಲಯಗಳಿಗೆ ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್ಗಳು ಕಡ್ಡಾಯವಾಗಿ ಸ್ಟಿಕರ್ ಅಂಟಿಸಿಕೊಳ್ಳಬೇಕಿದೆ. ಸ್ವಯಂ ನೋಂದಣಿಯಾಗಿರುವ ವಾಹನಗಳಿಗೆ ಜಲಮಂಡಳಿ ವತಿಯಿಂದ ಸ್ಟಿಕ್ಕರ್ಗಳನ್ನು ಸಿದ್ಧಪಡಿಸಿ ಪಾಲಿಕೆಗೆ ನೀಡಿದೆ.
ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ಈ ಸ್ಟಿಕ್ಕರ್ಗಳನ್ನು ವಲಯವಾರು ಹಂಚಿಕೆ ಮಾಡಲಾಗಿದೆ. ಅದರಂತೆ, ಪ್ರತಿ ಟ್ಯಾಂಕರ್ ಮಾಲೀಕರು ಪಾಲಿಕೆಯಲ್ಲಿ ಸ್ವಯಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಮತ್ತು ಪಾಲಿಕೆ ನೀಡಿರುವ ಸ್ಟಿಕರ್ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ, ಸ್ವಯಂ ನೋಂದಣಿಯಾಗಿರುವ ಸಂಖ್ಯೆಯನ್ನು ವಾಹನಗಳ ಮೇಲೆ ಪ್ರದರ್ಶಿಸಬೇಕಿದೆ. ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕಿದೆ. ಇಲ್ಲವಾದಲ್ಲಿ ಶಿಸ್ತು ಕ್ರಮ ಜರಿಸಲಾಗುವುದು ಎಂದು ಎಚ್ಚರಿಕೆಯ ಸಂದೇ ನೀಡಿದ್ದಾರೆ.