ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ನಡೆದ ಆರ್.ಆರ್.ನಗರದ ಪಟ್ಟಣಗೆರೆ ಮುಖ್ಯ ರಸ್ತೆಯ ಹೆಮ್ಮಿಗೆಪುರದಲ್ಲಿರುವ ಶೆಡ್ ಮೇಲಿನ ಆಸ್ತಿ ತೆರಿಗೆ ಪಾವತಿಸುವಂತೆ ಅದರ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.
ಈ ಶೆಡ್ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿದೆ. ಇದಕ್ಕೆ 2008-09ರಿಂದ ಆಸ್ತಿ ತೆರಿಗೆ ಪಾವತಿಸಲು ಪಾಲಿಕೆ ಅವಕಾಶ ಕಲ್ಪಿಸಿದೆ. ಆದರೆ ಇದುವರೆಗೂ ತೆರಿಗೆ ಪಾವತಿಸಿಲ್ಲ. ಹೀಗಾಗಿ, ಶೆಡ್ ಮಾಲೀಕ ಜಯಣ್ಣ ಎಂಬವರಿಗೆ ನೋಟಿಸ್ ನೀಡಲಾಗಿದೆ.