ಕರ್ನಾಟಕ

karnataka

ETV Bharat / state

ಸರ್ಕಾರ ಹೊರಡಿಸಿರುವ ಪರೀಕ್ಷಾ ವೇಳಾಪಟ್ಟಿ ಒಂದು ಸಮುದಾಯಕ್ಕೆ ಸೀಮಿತವಾಗಿದೆ: ಬಿ.ಸಿ.ನಾಗೇಶ್ - ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್

ರಾಜ್ಯದ ದುರಾದೃಷ್ಟಕ್ಕೆ ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್
ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್

By ETV Bharat Karnataka Team

Published : Feb 5, 2024, 10:20 PM IST

ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಒಂದು ಸಮುದಾಯದ ಮತ ಗಟ್ಟಿಮಾಡಿಕೊಳ್ಳಲು ಅವರು ಹೊಸ ನೀತಿ ರೂಪಿಸುತ್ತಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದ್ದಾರೆ. ನಗರದಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ದುರಾದೃಷ್ಟಕ್ಕೆ ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದಾರೆ ಎಂದರು. ಸರ್ಕಾರ ಹೊರಡಿಸಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ವಾರದ ಎಲ್ಲಾ ದಿನಗಳು ಬೆಳಿಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾದರೆ, ಶುಕ್ರವಾರ ಮಾತ್ರ ಮಧ್ಯಾಹ್ನ 2ಕ್ಕೆ ಆರಂಭವಾಗುತ್ತಿರುವುದು ಒಂದು ಸಮುದಾಯಕ್ಕೆ ಸೀಮಿತವಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ನಮಾಜ್‌ಗೆ ಅವಕಾಶ ಮಾಡಿಕೊಟ್ಟಿರುವ ಸರ್ಕಾರ ತಾರತಮ್ಯ ಮಾಡುತ್ತಿದೆ. ಒಂದು ಸಮುದಾಯಕ್ಕೆ ಸೀಮಿತವಾಗಿರುವ ರಾಜ್ಯ ಸರ್ಕಾರ ಒಡೆದು ಆಳುವ ನೀತಿ ಮುಂದುವರಿಸಿದೆ. ಈಗ ಒಂದು ಸಮುದಾಯದ ಸರ್ಕಾರವಾಗಿದ್ದು, ಹಿಂದೂ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಭಾರಿ ಪೈಪೋಟಿಯ ನಡುವೆಯೂ ನಾವು ಗೆಲುವು ಸಾಧಿಸಿದ್ದೆವು. ಹೀಗಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿಯೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ನಂಬಿಕೆ ಹೊಂದಿದ್ದೇವೆ ಎಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಮಾಜಿ ಸಚಿವ ಮಾಧುಸ್ವಾಮಿ

ತುಮಕೂರಿನಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಾರಿ ಜೆಡಿಎಸ್, ಬಿಜೆಪಿ ಒಟ್ಟಿಗೆ ಲೋಕಸಭೆ ಚುನಾವಣೆಗೆ ಹೋಗುತ್ತಿವೆ. ನಾವೇಕೆ ಅದರ ಬಗ್ಗೆ ಅವರೊಂದಿಗೆ ಚರ್ಚಿಸಬೇಕಿದೆ?. ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತದೆ ಎಂದು ತಿಳಿಸಿದರು.

ದೇವೇಗೌಡರು ಕಳೆದ ಸಲ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಜಿಲ್ಲೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಮತಗಳಿದ್ದವು. ಸ್ಥಳೀಯವಾಗಿ ಅಭ್ಯರ್ಥಿ ಗೆಲ್ಲಿಸಬೇಕು ಅಂತ ತೀರ್ಮಾನ ಮಾಡಿದಾಗ ಜನರು ಜಾತಿ ಪಕ್ಷ ಬಿಟ್ಟು ವೋಟ್ ಹಾಕಿದರು ಎಂದು ತಿಳಿಸಿದರು.ಈಗ ಜಿಲ್ಲೆಯಲ್ಲಿ ಬಿಜೆಪಿ ಸ್ಥಾನ ಕಳೆದುಕೊಂಡಿದೆ. ನಾವು- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಉತ್ಸಾಹ ಬಂದಿದೆ. ವಾಸ್ತವಾಂಶಗಳು ಅರ್ಥವಾಗ್ತಿಲ್ಲ. ಒಳ್ಳೆದಾಗಬಹುದು, ಆಗದೆಯೂ ಇರಬಹುದು ಎಂದರು.

ರಾಮಮಂದಿರ ಉದ್ವಾಟನೆ ದಿನ ಎಲ್ಲೂ ಮೆರವಣಿಗೆ ಮಾಡಬಾರದು ಅಂತಾ ಆದೇಶ ಮಾಡಿದ್ರು. ಇದು ಇಸ್ಲಾಮಿಕ್ ರಾಷ್ಟ್ರನಾ?. ನಾನು ಎಸ್​ಪಿಗೆ ಹೇಳಿದ್ದೆ ನಾನು ಬರ್ತಿದಿನಿ ಧಮ್ ಇದ್ದರೆ ಬಂಧಿಸಿ ಅಂತ. ಯಾಕಪ್ಪ ಮೆರವಣಿಗೆ ಬ್ಯಾನ್ ಮಾಡಬೇಕು. ದೇವರ ಮೆರವಣಿಗೆ ಏಕೆ ನಿಲ್ಲಿಸಬೇಕು. ನಾವು ಒಂದು ರೀತಿ ನಿರ್ಲಿಪ್ತರಾಗಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್‌ ಬಿಡುವುದಿಲ್ಲ, ಲೋಕಸಭೆ ಸ್ಪರ್ಧಿಸುವುದಿಲ್ಲ: ಲಕ್ಷ್ಮಣ್ ಸವದಿ

ABOUT THE AUTHOR

...view details