ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್ನಿಂದ ಚುಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತ ಯುವಕ. ಬೈಕ್ನಲ್ಲಿ ಇಬ್ರಾಹಿಂ ಹೋಗುತ್ತಿದ್ದಾಗ ದುಷ್ಕರ್ಮಿಯೊಬ್ಬ ಸ್ಕ್ರೂ ಡ್ರೈವರ್ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ.
ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್ನಿಂದ ಚುಚ್ಚಿ ಯುವಕನ ಭೀಕರ ಕೊಲೆ - Young man murder - YOUNG MAN MURDER
ಬೆಳಗಾವಿಯಲ್ಲಿ ದುಷ್ಕರ್ಮಿಯೊಬ್ಬ ಯುವಕನೋರ್ವನನ್ನು ಸ್ಕ್ರೂ ಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.
ಮಹಾಂತೇಶ ನಗರದ ಬ್ರಿಡ್ಜ್ ಬಳಿ ಯುವಕನ ಕೊಲೆ (ETV Bharat)
Published : May 16, 2024, 5:47 PM IST
ಘಟನೆ ಬೆಳಗಾವಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ರಾಹಿಂನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಇಬ್ರಾಹಿಂ ಕೊನೆಯುಸಿರೆಳೆದಿದ್ದಾನೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರಲ್ಲಿ ಮುಳುಗಿ ಸಾವು - Four Children Drown