ಬೆಳಗಾವಿ:ಭಾರತೀಯ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬೆಳಗಾವಿ ಜಿಲ್ಲೆಯ ಯೋಧ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇಂದು ನಡೆದಿದೆ.
ಮೂಡಲಗಿ ತಾಲೂಕಿನ ಕಲ್ಲೋಳಿಯ ಸುಭಾಷ ಖಾನಗೌಡ್ರ (24) ಮೃತಪಟ್ಟ ಯೋಧ. ಇವರು ಕಳೆದ ಐದು ವರ್ಷಗಳಿಂದ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.