ಕರ್ನಾಟಕ

karnataka

ETV Bharat / state

ಬೆಳಗಾವಿ ಉದ್ಯಮಿ ಸಾವು ಪ್ರಕರಣ: ತಾಯಿ ವಿರುದ್ಧವೇ ಮಗಳ ದೂರು, ಶವ ಹೊರತೆಗೆದು ಪರೀಕ್ಷೆ - BELAGAVI MURDER CASE

ತನ್ನ ತಂದೆಯದ್ದು ಸಹಜ ಸಾವಲ್ಲ, ಕೊಲೆ ಎಂದು ಆರೋಪಿಸಿ ಪುತ್ರಿ ತನ್ನ ತಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

BELAGAVI BUSINESSMAN MURDER CASE
ಮೃತದೇಹ ಹೊರ ತೆಗೆಯುತ್ತಿರುವುದು. (ETV Bharat)

By ETV Bharat Karnataka Team

Published : Oct 16, 2024, 6:25 PM IST

Updated : Oct 16, 2024, 7:32 PM IST

ಬೆಳಗಾವಿ:ಬೆಳಗಾವಿಯಲ್ಲಿ ಉದ್ಯಮಿಯ ಸಾವು ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸ್ವತಃ ಮಗಳೇ ತನ್ನ ತಂದೆಯದ್ದು ಸಹಜ ಸಾವಲ್ಲ ಎಂದು ತಾಯಿಯ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗಾಗಿ, ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಅಂತ್ಯಕ್ರಿಯೆ ಮಾಡಿದ್ದ ವ್ಯಕ್ತಿಯ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಅ‌.9ರಂದು ಬೆಳಗಾವಿಯ ಆಂಜನೇಯ ನಗರದ ನಿವಾಸಿ ಸಂತೋಷ್ ಪದ್ಮಣ್ಣವರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದು ಸಹಜ ಸಾವು ಎಂದು ಮರುದಿನ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಅ.15ರಂದು ಸಂತೋಷ್ ಅವರ ಪುತ್ರಿ ಸಂಜನಾ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿ, ತಂದೆಯ ಸಾವಿನ ಬಗ್ಗೆ ಅನುಮಾನವಿದೆ. ಸೂಕ್ತ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ (ETV Bharat)

ಘಟನೆಗೂ ಮುನ್ನ ಮನೆಗೆ ಯಾರೆಲ್ಲ ಬಂದಿದ್ದರೆಂದು ಸಿಸಿಟಿವಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಕೆಲವು ದೃಶ್ಯಗಳನ್ನು ಡಿಲೀಟ್ ಮಾಡಿರುವ ಅನುಮಾನ ವ್ಯಕ್ತಪಡಿಸಿ ಸಂಜನಾ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸಂತೋಷ್​ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಸಂಜನಾ, ಬೆಳಗಾವಿ ಎಸಿ ಶ್ರವಣ ನಾಯಕ ಹಾಗೂ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಸಂತೋಷ್​ ಅವರ ಪತ್ನಿ ಉಮಾ ಪದ್ಮಣ್ಣವರ, ಬೆಳಗಾವಿ ನಗರದ ಶೋಭಿತಗೌಡ ಹಾಗೂ ಪದ್ಮಣ್ಣವರ ಮನೆ ಕೆಲಸ ಮಾಡುತ್ತಿದ್ದ ನಂದಾ ಕುರಿಯಾ, ಪ್ರಕಾಶ ಕುರಿಯಾ ಮತ್ತು ಇನ್ನೋರ್ವ ಅಪರಿಚಿತ ಸೇರಿ ಒಟ್ಟು ಐವರು ಆರೋಪಿಗಳ ವಿರುದ್ಧ ಕೇಸು ದಾಖಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಕಾನೂನು ಕ್ರಮ: ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಪ್ರತಿಕ್ರಿಯಿಸಿ, "ಅ.9ರಂದು ನಮ್ಮ ಮನೆಯಲ್ಲಿ ಕೊಲೆಯಾಗಿದೆ ಎಂದು ಮೃತರ ಪುತ್ರಿ ಸಂಜನಾ ಎಂಬವರು ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದಾರೆ‌. ತಮ್ಮ ತಾಯಿ ಮತ್ತು ನಾಲ್ವರು ಆರೋಪಿಗಳ ವಿರುದ್ಧ ಅವರು ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಡಿಲೀಟ್ ಮಾಡಲಾಗಿದೆ. ಮನೆಯಿಂದ ಇಬ್ಬರು ಹೊರ ಹೋಗಿರುವ ದೃಶ್ಯ ಲಭ್ಯವಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸತ್ಯಾಂಶ ತಿಳಿಯಲಿದೆ. ಸದ್ಯಕ್ಕೆ ಯಾವ ಆರೋಪಿಗಳನ್ನೂ ವಶಕ್ಕೆ ಪಡೆದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ" ಎಂದರು.

ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: 'ಮಗನೇ ಬಂದಷ್ಟು ಖುಷಿ' ಎಂದ ಕಾಶಿನಾಥಯ್ಯ

Last Updated : Oct 16, 2024, 7:32 PM IST

ABOUT THE AUTHOR

...view details