ಬೆಳಗಾವಿ:ಇಲ್ಲಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನದ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ ಮಾಡಿದ್ದಾರೆ. ಸಾಂಗ್ಲಿ ಪಟ್ಟಣದ ಸಚಿನ ಮೇನಕುದುಳೆ ಹಾಗೂ ಮಾರುತಿ ಮಾರಗುಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಹಣ ಸಾಗಿಸುತ್ತಿದ್ದ ಗೂಡ್ಸ್ ವಾಹನ (ETV Bharat) ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನ್‌ಅನ್ನೇ ಮಾಡಿಫೈ ಮಾಡಿಕೊಂಡಿದ್ದರು. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
ವಶಕ್ಕೆ ಪಡೆದ ಹಣ (ETV Bharat) ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಹಣ ವಶಕ್ಕೆ ಪಡೆದ ಅಧಿಕಾರಿಗಳು (ETV Bharat) ಇದನ್ನೂ ಓದಿ:ಬೆಂಗಳೂರು: ಮಚ್ಚಿನಿಂದ ಪತ್ನಿಯ ಬರ್ಬರ ಹತ್ಯೆ, ಆರೋಪಿ ಪತಿ ಬಂಧನ