ಬೆಳಗಾವಿ: ಜಿಲ್ಲೆಯ ಬಸವನ ಗಲ್ಲಿಯಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಐವರು ಗಾಯಾಳುಗಳ ಪೈಕಿ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೇಮಂತ್ ಭಟ್(27) ಮೃತರು.
ಅಪಾರ್ಟ್ಮೆಂಟ್ ಮನೆಯಲ್ಲಿ ಗ್ಯಾಸ್ ಒಲೆ ಹೊತ್ತಿಸುವಾಗ ಅವಘಡ ಸಂಭವಿಸಿತ್ತು. ಲೈಟರ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಭಟ್ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು.