ಬೆಳಗಾವಿ:ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವಿನ ನಗೆ ಬೀರಿದ್ದಾರೆ.
ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಈ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಿದ್ದರು. ಬಹಿರಂಗ ಸಮಾವೇಶ, ರೋಡ್ ಶೋ, ಮನೆ ಮನೆ ಭೇಟಿ ಸೇರಿದಂತೆ ಮತದಾರರನ್ನು ಸೆಳೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸಿದ್ದರು. ಅಭ್ಯರ್ಥಿಗಳ ನಡುವೆ ಟಾಕ್ ವಾರ್ ಕೂಡ ಜೋರಾಗಿತ್ತು.
ಪುತ್ರ ಮೃಣಾಲ್ ಪರ ಲಕ್ಷ್ಮೀ ಹೆಬ್ಬಾಳ್ಕರ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡಿದ್ದರು. ಇನ್ನು ಜಗದೀಶ್ ಶೆಟ್ಟರ್ ಬೆನ್ನಿಗೆ ಅಂಗಡಿ ಕುಟುಂಬ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿಂತಿದ್ದರು. ಅಂತಿಮವಾಗಿ ಶೆಟ್ಟರ್ ವಿಜಯ ಪತಾಕೆ ಹಾರಿಸಿದ್ದಾರೆ.