ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಸಿಸಿಬಿ ಪೊಲೀಸರ ದಾಳಿ: ತಲೆಮೆರೆಸಿಕೊಂಡಿದ್ದ ಇಬ್ಬರು ರೌಡಿಶೀಟರ್​ಗಳ​ ಬಂಧನ

ತಲೆಮೆರಸಿಕೊಂಡಿದ್ದ ಇಬ್ಬರು ರೌಡಿಶೀಟರ್​​ಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

By ETV Bharat Karnataka Team

Published : Jan 25, 2024, 3:50 PM IST

arrested two rowdy sheeters
ಇಬ್ಬರು ರೌಡಿಶೀಟರ್​ ಬಂಧನ

ಬೆಂಗಳೂರು: ಹತ್ಯೆ, ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿ ಹಾಗೂ ಆತನ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜಾರ್ಜ್ ಅಲಿಯಾಸ್ ಮೈಕಲ್ ಹಾಗೂ ಆತನ ಸಹಚರ ಮುತ್ತುರಾಜ್ ಬಂಧಿತ ಆರೋಪಿಗಳು.

ಜಾರ್ಜ್ ಅಲಿಯಾಸ್ ಮೈಕಲ್ ವಿರುದ್ಧ ಒಂದು ಕೊಲೆ, ಒಂದು ಡಕಾಯಿತಿ ಪ್ರಕರಣ ದಾಖಲಾಗಿವೆ. ನಾಲ್ಕು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಮುತ್ತುರಾಜ್ ವಿರುದ್ಧ ಎರಡು ಕೊಲೆ, ನಾಲ್ಕು ಕೊಲೆ ಯತ್ನ, ಒಂದು ಹಲ್ಲೆ, ಎರಡು ಎನ್‌ಡಿಪಿಎಸ್‌, ಮೂರು ದರೋಡೆ, ಒಂದು ದರೋಡೆಗೆ ಸಿದ್ಧತೆ ನಡೆಸಿದ್ದ ಪ್ರಕರಣಗಳು ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿವೆ.

ಆ ಪೈಕಿ ಎಂಟು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಈತ ಆರು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿಗಳು ವಿವೇಕ ನಗರದ ಮುತ್ತುರಾಜ್ ಅವರ ಮನೆಯಲ್ಲಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆ, ಬೆಸ್ಕಾಂ ಎಇಇ ಬಂಧನ: ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ (ಬೆಸ್ಕಾಂ) ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಬೆಸ್ಕಾಂನ ಇ-9 ಉಪವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ನವೀನ್ ಕುಮಾರ್ ಸಿಕ್ಕಿಬಿದ್ದ ಆರೋಪಿ.

ನಾಗವಾರ ವ್ಯಾಪ್ತಿಯ ಥಣಿಸಂದ್ರದ ಕಾರ್ಯಪಾಲನೆ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್ ಅವರು ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಲು ಚಂದನ್ ಕುಮಾರ್ ಎಂಬುವರಿಂದ 80 ಸಾವಿರ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಚಂದನ್ ಕುಮಾರ್ ಅವರು ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು. ಬುಧವಾರ ಸಂಜೆ 80 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದಾಗ ಆರೋಪಿ ನವೀನ್ ಕುಮಾರ್ ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದರು.

ಬಿಟ್​ಕಾಯಿನ್ ಅಕ್ರಮ ಹಗರಣ , ಇಬ್ಬರು ಇನ್ಸ್‌ಪೆಕ್ಟರ್​ಗಳ ಬಂಧನ:ಬಿಟ್​ಕಾಯಿನ್ ಅಕ್ರಮ ಹಗರಣ ಕುರಿತು ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಇಬ್ಬರು ಇನ್ಸ್‌ಪೆಕ್ಟರ್ ಗಳನ್ನ ಬುಧವಾರ ತಡರಾತ್ರಿ ಬಂಧಿಸಿದೆ. ಸಿಸಿಬಿ ಇನ್‌ಸ್ಪೆಕ್ಟ‌ರ್ ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಸಂತೋಷ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಬುಧವಾರ ಎಸ್‌ಐಟಿ ಅಧಿಕಾರಿಗಳು ಪ್ರಶಾಂತ್ ಬಾಬು ಹಾಗೂ ಸಂತೋಷ್ ಅವರನ್ನು ವಿಚಾರಣೆಗೆ ಕರೆಸಿದ್ದರು. ರಾತ್ರಿಯವರೆಗೂ ವಿಚಾರಣೆ ನಡೆಸಿದ ಬಳಿಕ ಇಬ್ಬರನ್ನೂ ಬಂಧಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣದ ತನಿಖೆ ಸಂದರ್ಭದಲ್ಲಿ ಸಾಕ್ಷಿ ನಾಶಪಡಿಸಿದ್ದ ಆರೋಪದಡಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಿಸಿಬಿಯ ಕೆಲ ಪೊಲೀಸ್ ಅಧಿಕಾರಿಗಳು ಹಾಗೂ ಇತರರ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು.

ಇದನ್ನೂಓದಿ:ಮೇಲುಕೋಟೆ ಶಿಕ್ಷಕಿ ಹತ್ಯೆ ಪ್ರಕರಣ: ಬರ್ತ್‌ಡೇ ನೆಪದಲ್ಲಿ ಕರೆಸಿ ಕೊಲೆಗೈದ ಆರೋಪಿ ಅರೆಸ್ಟ್

ABOUT THE AUTHOR

...view details