ಕರ್ನಾಟಕ

karnataka

ETV Bharat / state

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.12ಕ್ಕೆ ಬೆಂಗಳೂರು ಚಲೋ ರ್‍ಯಾಲಿ: ವಾಸುದೇವ ಮೇಟಿ - ರೈತರು ಬೆಂಗಳೂರು ಚಲೋ ರ್‍ಯಾಲಿ

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಂದಿನ ವಾರ ಧಾರವಾಡದಿಂದ ಬೆಂಗಳೂರು ಚಲೋ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

ರೈತರ ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ರ್‍ಯಾಲಿ
ರೈತರ ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ರ್‍ಯಾಲಿ

By ETV Bharat Karnataka Team

Published : Feb 7, 2024, 5:27 PM IST

ಹುಬ್ಬಳ್ಳಿ:ರೈತರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ ಫೆ.12 ರಂದು 'ಬೆಂಗಳೂರು ಚಲೋ ರ್‍ಯಾಲಿ' ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ತೆಗೆದುಕೊಂಡ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ರೈತರಿಗೆ ಬೆಳೆವಿಮಾ, ಬೆಳೆ ಪರಿಹಾರವನ್ನು ಪ್ರತಿ ಹೆಕ್ಟೇರ್​ಗೆ 25ಸಾವಿರ ರೂಪಾಯಿ ನಿಗದಿಪಡಿಸಬೇಕು. ಮಹದಾಯಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಶೀಘ್ರವಾಗಿ ಜಾರಿ ಮಾಡಬೇಕು ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈಗಿರುವ ನೀರಾವರಿ ಸಚಿವರನ್ನು ತೆಗೆದು ನುರಿತ ಶಾಸಕರನ್ನು ನೀರಾವರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಫೆ.11 ರಂದು ರಾತ್ರಿ ಹುಬ್ಬಳ್ಳಿ ಧಾರವಾಡದಿಂದ ಎರಡು ಸಾವಿರಕ್ಕೂ ಅಧಿಕ ರೈತರು ಬೆಂಗಳೂರಿಗೆ ತೆರಳಿ ಫೆ.12 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದರು.

ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸಭೆ ಕರೆದು ನಿಯೋಗವನ್ನು ಕೇಂದ್ರದ ಬಳಿ ತೆಗೆದುಕೊಂಡು ಹೋಗಿ ಸೂಕ್ತ ನಿರ್ಧಾರ ಪ್ರಕಟಿಸದೇ ಹೋದಲ್ಲಿ 15 ದಿನಗಳ ನಂತರ ಹು-ಧಾ ಬಂದ್​ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ರವಾನಿಸಿದರು. ಸುದ್ದಿಗೋಷ್ಠಿಯಲ್ಲಿ ಧಾರವಾಡ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಕುನ್ನೂರ, ಬಸಪ್ಪ ಸಂಭೋಜಿ, ಹಜರತ್ ಅಲಿ ಜೋಡಮನಿ, ಫಕ್ಕೀರಪ್ಪ ಪೂಜಾರ, ಅನ್ನಪೂರ್ಣ ಪಾಟೀಲ್ ಉಪಸ್ಥಿತರಿದ್ದರು.

ಇದನ್ನೂ ಓದಿ:ರಾಜ್ಯ ಸರ್ಕಾರ​​ ಜಂತರ ಮಂತರ್​ನಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಪ್ರಾರಂಭಿಸಿದೆ: ಈಶ್ವರಪ್ಪ

ABOUT THE AUTHOR

...view details